

ಡೆಹರಾಡೂನ್: ಉತ್ತರಾಖಂಡ್ ರಾಜಕೀಯ ಬಿಕ್ಕಟ್ಟಿಗೆ ಬಾಬಾ ರಾಮದೇವ್ ಕೈವಾಡವಿದೆ ಎನ್ನುವ ಕಾಂಗ್ರೆಸ್ ಆರೋಪಗಳನ್ನು ತಳ್ಳಿ ಹಾಕಿದ ಅವರು, ಬಂಡಾಯ ಕಾಂಗ್ರೆಸ್ ಶಾಸಕರೊಂದಿಗೆ ಯಾವುದೇ ಸಂಪರ್ಕ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜಕೀಯ ನನಗೆ ಇಷ್ಟವಾದ ಸಂಗತಿಯಲ್ಲ. ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ತಮ್ಮ ಪಕ್ಷದ ವ್ಯವಹಾರಗಳತ್ತ ಹೆಚ್ಚಿನ ಗಮನಹರಿಸುವುದು ಅಗತ್ಯವಾಗಿದೆ ಎಂದು ತಿರುಗೇಟು ನೀಡಿದ್ದಾರೆ.
ಉತ್ತರಾಖಂಡ್‌ನ ಕಾಂಗ್ರೆಸ್ ಮುಖ್ಯಸ್ಥ ಕಿಶೋರ್ ಉಪಾಧ್ಯಾಯ, ರಾಜ್ಯದ ರಾಜಕೀಯ ಬಿಕ್ಕಟ್ಟಿಗೆ ಯೋಗಾ ಗುರು ಬಾಬಾ ರಾಮದೇವ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜಂಟಿಯಾಗಿ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದರು. .