

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿರುವ ಪರೇಡ್ ಬಜಾರ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ ಮಗುವೊಂದು ಸಾವನ್ನಪ್ಪಿ 100 ಅಂಗಡಿಗಳು ಭಸ್ಮವಾಗಿರುವ ಘಟನೆ ಶನಿವಾರ ನಡೆದಿದೆ.
ಇಂದು ಬೆಳ್ಳಂಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಪರೇಡ್ ಬಜಾರ್ ನಲ್ಲಿನ ಸುತ್ತಮುತ್ತಲೂ ಹೊಗೆ ತುಂಬಿಕೊಂಡಿದೆ. ಅಗ್ನಿಯ ನರ್ತನ ಮುಂದುವರೆಯುತ್ತಲೇ ಇದ್ದು, ಈ ವರೆಗೂ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿಲ್ಲ. ಅಗ್ನಿ ಅವಘಡ ಅಲ್ಲಿನ ಸ್ಥಳೀಯರಿಗೆ ಸಾಕಷ್ಟು ಸಮಸ್ಯೆಯನ್ನುಂಟು ಮಾಡಿದೆ ಎಂದು ತಿಳಿದುಬಂದಿದೆ.
ಇದೀಗ ಸ್ಥಳಕ್ಕಾಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು 20 ಕ್ಕೂ ಹೆಚ್ಚು ವಾಹನಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೆ, ಈ ವರೆಗೂ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿಲ್ಲ. ಸ್ಥಳಕ್ಕಾಗಮಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.