ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕಾಶ್ಮೀರದಲ್ಲಿ ಉಗ್ರರಿಂದ ಗ್ರೆನೇಡ್ ದಾಳಿ: 2 ಯೋಧರು, 3 ನಾಗರಿಕರಿಗೆ ಗಂಭೀರ ಗಾಯ

ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು...
ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಯೋಧರು ಹಾಗೂ ಮೂವರು ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವರದಿಗಳ ಪ್ರಕಾರ, ಅನಂತನಾಗ್ ಜಿಲ್ಲೆಯ ಬಿಜ್ ಬೆಹಾರ ಪೊಲೀಸ್ ಠಾಣೆಯ ಬಳಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಘಟನೆಯಲ್ಲಿ ಕನಿಷ್ಠ ಇಬ್ಬರು ಸೇನಾ ಸಿಬ್ಬಂದಿ ಹಾಗೂ ಮೂವರು ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಿಜ್ ಬೆಹಾರ ನಗರದ ಜಮ್ಮು ಮತ್ತು ಕಾಶ್ಮೀರ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಉಗ್ರರಾಗಿ ಸೇನೆ ಶೋಧ ಕಾರ್ಯಾಚರಣೆ ಆರಂಭಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಐಎಎನ್ಎಸ್ ಗೆ ತಿಳಿಸಿದ್ದಾರೆ.
ಸ್ಫೋಟದಲ್ಲಿ ಇಬ್ಬರು ಸೇನಾ ಸಿಬ್ಬಂದಿ ಸೇರಿದಂತೆ ಐವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com