ಕಾಶ್ಮೀರದಲ್ಲಿ ಮೈತ್ರಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ ಪಿಡಿಪಿ-ಬಿಜೆಪಿ ನಾಯಕರು

ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡು ತಿಂಗಳ ರಾಜ್ಯಪಾಲರ ಆಡಳಿತದ ನಂತರ ಕಣಿವೆ ರಾಜ್ಯದಲ್ಲಿ ಮತ್ತೆ ಪಿಡಿಪಿ-ಬಿಜೆಪಿ ಮೈತ್ರಿಕೂಟ ಸರ್ಕಾರ...
ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ
Updated on: 
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡು ತಿಂಗಳ ರಾಜ್ಯಪಾಲರ ಆಡಳಿತದ ನಂತರ ಕಣಿವೆ ರಾಜ್ಯದಲ್ಲಿ ಮತ್ತೆ ಪಿಡಿಪಿ-ಬಿಜೆಪಿ ಮೈತ್ರಿಕೂಟ ಸರ್ಕಾರ ರಚನೆಯಾಗುತ್ತಿದ್ದು, ಈ ಸಂಬಂಧ ಶನಿವಾರ ರಾಜ್ಯಪಾಲ ಎನ್ ಎನ್ ವೋಹ್ರಾ ಅವರನ್ನು ಭೇಟಿ ಮಾಡಿದ ಉಭಯ ಪಕ್ಷಗಳ ನಾಯಕರು ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ.
ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹಾಗೂ ಜಮ್ಮು ಕಾಶ್ಮೀರ ಬಿಜೆಪಿ ಅಧ್ಯಕ್ಷ ನಿರ್ಮಲ್ ಸಿಂಗ್ ಅವರು ಇಂದು ರಾಜ್ಯಪಾಲರನ್ನು ಭೇಟಿ ಮಾಡಿ, ಸರ್ಕಾರ ರಚನೆಯ ಹಕ್ಕು ಮಂಡಿಸಿದರು.
ರಾಜ್ಯಪಾಲರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮೆಹಬೂಬಾ ಮುಫ್ತಿ, ರಾಜ್ಯದ ಅಭಿವೃದ್ಧಿ ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವುದೇ ನಮ್ಮ ಸರ್ಕಾರದ ಪ್ರಮುಖ ಅಜೆಂಡಾ ಎಂದು ಹೇಳಿದರು.
ಶೀಘ್ರದಲ್ಲೇ ಮೆಹಬೂಬಾ ಮುಫ್ತಿ ಅವರು ಕಣಿವೆ ರಾಜ್ಯದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಹಾಗೂ ಬಿಜೆಪಿ ನಿರ್ಮಲ್ ಸಿಂಗ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಪಿಡಿಪಿ-ಬಿಜೆಪಿ ಮೈತ್ರಿಕೂಟ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಮುಫ್ತಿ ಮೊಹಮ್ಮದ್ ಸಯೀದ್ ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಜನವರಿಯಲ್ಲಿ ನಿಧನರಾದರು. ಬಳಿಕ ಬಿಜೆಪಿ ಮೈತ್ರಿಕೂಟದ ಒಪ್ಪಂದಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರದ ನೇತೃತ್ವ ವಹಿಸಿಕೊಳ್ಳಲು ಮೆಹಬೂಬಾ ಮುಫ್ತಿ ನಿರಾಕರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com