

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಲಡಾಕ್ ಪ್ರದೇಶದ ಸಿಯಾಚಿನ್ ನಲ್ಲಿ ಶುಕ್ರವಾರ ಸಂಭವಿಸಿದ ಹಿಮಾಪಾತದಲ್ಲಿ ನಾಪತ್ತೆಯಾಗಿರುವ ಯೋಧ ಬದುಕಿರುವ ಸಾಧ್ಯತೆಗಳಿಲ್ಲ ಎಂದು ಸೇನಾ ಮೂಲಗಳು ಮಾಹಿತಿ ನೀಡಿದೆ.
ಜಮ್ಮು ಮತ್ತು ಕಾಶ್ಮೀರದ ಲಡಾಕ್ ಪ್ರದೇಶದ ಸಿಯಾಚಿನ್ ನಲ್ಲಿ ಭಾರತದ ಇಬ್ಬರು ಯೋಧರು ಗಸ್ತು ತಿರುಗುತ್ತಿದ್ದರು. ಈ ವೇಳೆ ಹಿಮಪಾತ ಸಂಭವಿಸಿತ್ತು. ಹಿಮದ ಮಧ್ಯೆ ಇಬ್ಬರು ಯೋಧರು ಕಣ್ಮರೆಯಾಗಿದ್ದರು. ಕಾರ್ಯಾಚರಣೆ ನಡೆಸಿದ್ದ ಸೇನಾ ಸಿಬ್ಬಂದಿಗಳು ಓರ್ವ ಯೋಧನನ್ನು ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಂಜೆ ಹುತಾತ್ಮರಾಗಿದ್ದರು.
ಇದೀಗ ಮತ್ತೊಬ್ಬ ಯೋಧನಿಗಾಗಿ ಕಾರ್ಯಾಚರಣೆ ಮುಂದುವರೆದಿದ್ದು, ಯೋಧ ಬದುಕುಳಿದಿರುವ ಸಾಧ್ಯತೆಗಳು ತೀರಾ ಕಡಿಮೆ ಇದೆ ಎಂದು ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆಂದು ತಿಳಿದುಬಂದಿದೆ.