ಇಂಡೋ- ಆಸಿಸ್ ಪಂದ್ಯ: ಬೆಟ್ಟಿಂಗ್ ನಲ್ಲಿ ತೊಡಗಿದ್ದ ನಾಲ್ವರ ಬಂಧನ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐಸಿಸಿ ವಿಶ್ವ ಟಿ20 ಕ್ರಿಕೆಟ್ ಮ್ಯಾಚ್ ಮೇಲೆ ಬೆಟ್ಟಿಂಗ್ ನಡೆಯುತ್ತಿದೆ ಎಂಬ ಖಚಿತ ಮಾಹಿತಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಮುಜಾಫರ್ ನಗರ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐಸಿಸಿ ವಿಶ್ವ  ಟಿ20 ಕ್ರಿಕೆಟ್ ಮ್ಯಾಚ್ ಮೇಲೆ ಬೆಟ್ಟಿಂಗ್ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. 
ಶಮ್ಲಿ ಜಿಲ್ಲೆಯ ನಯಾ ಬಜಾರ್ ನಲ್ಲಿರುವ ಮನೆಯೊಂದರಲ್ಲಿ ದಾಳಿ ಮಾಡಿದ ಪೊಲೀಸರು, ನಿನ್ನೆ ನಡೆದ ಭಾರತ, ಆಸ್ಟ್ರೇಲಿಯಾ ಕ್ರಿಕೆಟ್ ಮ್ಯಾಚ್ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ನಾಲ್ವರನ್ನು ಬಂಧಿಸಿದ್ದಾರೆ.  
ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿ ನಿಶಾಂಕ್ ಶರ್ಮಾ, ಆರೋಪಿಗಳಿಂದ ಆರು ಮೊಬೈಲ್ ಫೋನ್, ದಾಖಲೆ ಪತ್ರಗಳು ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದ್ದು, ಜೂಜು ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com