

ಕೊಲ್ಕೋತಾ: ಮಮತಾ ಬ್ಯಾನರ್ಜಿ ಅಧಿಕಾರ ಅವಧಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಹೆಚ್ಚೆಚ್ಚು ಬಾಂಬ್ ಕಾರ್ಖಾನೆಗಳು ನಿರ್ಮಾಣವಾಗಿವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆರೋಪಿಸಿದ್ದಾರೆ.
ಕೊಲ್ಕೋತಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಮತಾ ಅವಧಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಹೆಚ್ಚೆಚ್ಚು ಕಾರ್ಖಾನೆಗಳು ಸ್ಫಾಪನೆಯಾಗಿವೆ, ಅವೂ ಬಾಂಬ್ ಪ್ಯಾಕ್ಟರಿಗಳು ಎಂದು ಲೇವಡಿ ಮಾಡಿದ್ದಾರೆ,
ಮುಂಬರು ಪಶ್ಚಿಮ ಬಂಗಾಳ ವಿಧಾನ ಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ದೀದಿ ಸರ್ಕಾರದ ವೈಫಲ್ಯತೆಗಳನ್ನು ಜನತೆ ಮುಂದಿಡಲು ತಂತ್ರ ರೂಪಿಸುತ್ತಿದೆ.
ಇನ್ನು ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಎಡ ಪಕ್ಷಗಳೊಂದಿಗೆ ಮೈತ್ರಿ ಇಲ್ಲ, ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸುತ್ತದೆ ಎಂದು ಹೇಳಿದ್ದಾರೆ.