ಪಶ್ಚಿಮ ಬಂಗಾಳವನ್ನು ಟೀಕಿಸಿದವರಿಗೆ ನನಗಿಂತ ದೊಡ್ಡ ಶತೃವಿರುವುದಿಲ್ಲ: ಮಮತಾ ಬ್ಯಾನರ್ಜಿ

ಅಮಿತ್ ಶಾ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಂಗಾಳವನ್ನು ಟೀಕಿಸುವವರಿಗೆ ತಮಗಿಂತಲೂ ದೊಡ್ಡ ಶತೃವಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Updated on: 

ಕೋಲ್ಕತಾ: ಅತಿ ಹೆಚ್ಚು ಬಾಂಬ್ ತಯಾರಿಕೆ ಕಾರ್ಖಾನೆಗಳು ನಿರ್ಮಾಣವಾಗಿರುವುದು ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದ ಸಾಧನೆ ಎಂಬ ಅಮಿತ್ ಶಾ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಂಗಾಳವನ್ನು ಟೀಕಿಸುವವರಿಗೆ ತಮಗಿಂತಲೂ ದೊಡ್ಡ ಶತೃವಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಶೀಘ್ರವೇ ಅಧಿಕಾರ ಕಳೆದುಕೊಳ್ಳಲಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅಮಿತ್ ಶಾ ಅವರ ಹೇಳಿಕೆಯನ್ನು ಉಲ್ಲೇಖಿಸಿರುವ ಮಮತಾ ಬ್ಯಾನರ್ಜಿ, " ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರವೀಂದ್ರನಾಠ್ ಠಾಗೂರ್ ಅವರ ಬಗ್ಗೆ ಹೇಳಿಕೆ ನೀಡಿದ್ದಾರಂತೆ. ರವೀಂದ್ರನಾಠ್ ಠಾಕೂರ್ ಹಾಗೂ ನಜ್ರುಲ್ ಇಸ್ಲಾಂ ವಿರುದ್ಧ ಮಾತನಾಡಿದವರನ್ನು ರಾಜ್ಯದ ಜನತೆ ಕ್ಷಮಿಸುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮಮತಾ ಬ್ಯಾನರ್ಜಿ ಅಧಿಕಾರ ಅವಧಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಹೆಚ್ಚೆಚ್ಚು ಬಾಂಬ್ ಕಾರ್ಖಾನೆಗಳು ನಿರ್ಮಾಣವಾಗಿವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com