'ನಕ್ಸಲೈಟ್' ಕೇಜ್ರಿವಾಲ್ ರನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು: ಬಿಜೆಪಿ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರನ್ನು ನಕ್ಸಲೈಟ್ ನಂತೆ ಬಿಂಬಿಸಿರುವ ಬಿಜೆಪಿಯು, ನಕ್ಸಲೈಟ್ ಕೇಜ್ರಿವಾಲ್ ರನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು...
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರನ್ನು ನಕ್ಸಲೈಟ್ ನಂತೆ ಬಿಂಬಿಸಿರುವ ಬಿಜೆಪಿಯು, ನಕ್ಸಲೈಟ್ ಕೇಜ್ರಿವಾಲ್ ರನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು ಎಂದು ಬುಧವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು, ಅರವಿಂದ್ ಕೇಜ್ರಿವಾಲ್ ಮತ್ತು ಕಾಂಗ್ರೆಸ್ ನವರು ಬಿಜೆಪಿಯನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಕೇಜ್ರಿವಾಲ್ ಒಬ್ಬ ನಕ್ಸಲೈಟ್ ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಯಾವಾಗ ಏನನ್ನು ಬೇಕಾದರೂ ಮಾತನಾಡುತ್ತಾರೆ. ಪಾಕಿಸ್ತಾನ ವಿಷಯಕ್ಕೆ ಸಂಬಂಧಿಸಿ ಬಿಗಿನೀತಿ ಅನುಸರಿಸಿದರೆ, ಬಿಗಿನೀತಿಯನ್ನು ಯಾವ ಕಾರಣಕ್ಕೆ ಅನುಸರಿಸುತ್ತಿದ್ದಾರೆಂದು ಪ್ರಶ್ನಿಸುತ್ತಾರೆ. ಸೌಮ್ಯವಾದೀ ಧೋರಣೆ ಅನುಸರಿಸಿದರೆ, ಪಾಕಿಸ್ತಾನಕ್ಕೆ ಸ್ವಾಗತ ನೀಡುತ್ತಿದ್ದಾರೆಂದು ಹೇಳುತ್ತಾರೆ. ಕೇಜ್ರಿವಾಲ್ ಒಬ್ಬ 420. ಅವರನ್ನು ಗಂಭೀರವಾಗಿ ಹೇಗೆ ತೆಗೆದುಕೊಳ್ಳಲಿ ಎಂದು ಪ್ರಶ್ನಿಸಿದ್ದಾರೆ.

ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿ ಸಂಬಂಧ ನಿನ್ನೆಯಷ್ಟೇ ಪಾಕಿಸ್ತಾನ ಜಂಟಿ ತನಿಖಾ ತಂಡ ಅಧಿಕಾರಿಗಳು ಪಠಾಣ್ ಕೋಟ್ ಗೆ ಭೇಟಿ ನೀಡಿ ತನಿಖೆ ನಡೆಸಿದ್ದರು. ಆದರೆ, ಪಾಕ್ ತನಿಖಾ ತಂಡಕ್ಕೆ ಭಾರತದಲ್ಲಿ ತನಿಖೆ ನಡೆಸಲು ಅನುಮತಿ ನೀಡಿರುವ ಕೇಂದ್ರ ಸರ್ಕಾರದ ವಿರುದ್ಧ ಕೇಜ್ರಿವಾಲ್ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಹಲವು ಟೀಕೆಗಳನ್ನು ವ್ಯಕ್ತಪಡಿಸಿದ್ದರು. ಅಲ್ಲದೆ, ಪ್ರತಿಭಟನೆಯನ್ನು ನಡೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com