ದುಲಿಯಾಜಾನ್: ಬಾಂಗ್ಲಾದೇಶದಿಂದ ಅಸ್ಸಾಂಗೆ ಅಕ್ರಮ ನುಸುಳುವಿಕೆಯನ್ನು ಎನ್ ಡಿಎ ಸರ್ಕಾರ ತಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಕಾಂಗ್ರೆಸ್ ನೇತೃತ್ವದ ಅಸ್ಸಾಂ ಸರ್ಕಾರ ಒಳನುಸುಳುವಿಕೆಯನ್ನು ತಡೆಯುವಲ್ಲಿ ವಿಫಲವಾಗಿದೆ. ಈ ಹಿನ್ನಲೆಯಲ್ಲಿ, ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.
ಅಕ್ರಮ ಒಳನುಸುಳುವಿಕೆಯನ್ನು ತಡೆಯಲು ಭಾರತ-ಬಾಂಗ್ಲಾ ಗಡಿ ಭಾಗವನ್ನು ಕೇಂದ್ರ ಸರ್ಕಾರ ಬಂದ್ ಮಾಡಲಿದೆ ಎಂದು ಅವರು ಹೇಳಿದ್ದಾರೆ.
ಬಾಂಗ್ಲಾದಿಂದ ಭಾರತದೊಳಗೆ ಒಳನುಸುಳುವಿಕೆ ಜನ ಹೆಚ್ಚಾಗುತ್ತಿದ್ದಾರೆ. ಪ್ರತಿ ದಿನ ಈ ಸಮಸ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಕಾರಣವೇನು? ಅಸ್ಸಾಂ ಸರ್ಕಾರ ಇದನ್ನು ಏಕೆ ತಡೆಯುತ್ತಿಲ್ಲ? ಭಾರತ-ಬಾಂಗ್ಲಾದೇಶ ಗಡಿಯನ್ನು ಏಕೆ ಸಂಪೂರ್ಣವಾಗಿ ಬಂದ್ ಮಾಡಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.
ಚುನಾವಣೆ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೆಲವು ತಿಂಗಳ ಹಿಂದೆ ಇಂಡೋ-ಬಾಂಗ್ಲಾ ಗಡಿ ಸಮಸ್ಯೆ ಬಗ್ಗೆ ಬಾಂಗ್ಲಾದೇಶದ ಸರ್ಕಾರದೊಂದಿಗೆ ಚರ್ಚಿಸಲಾಗಿದೆ. ನಮಗೆ ಸ್ವಲ್ಪ ಸಮಯ ಬೇಕಿದೆ. ಇಂಡೋ-ಬಾಂಗ್ಲಾದೇಶ ಗಡಿಯನ್ನು ಬಂದ್ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.