ರಾಜ್ಯದಲ್ಲಿ ಈಗಾಗಲೇ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿದೆ. ಇಂತಹ ಸಂದರ್ಭದಲ್ಲಿ 'ನೀವು ಒಂದು ವೇಳೆ ವಿಶ್ವಾಸಮತಕ್ಕೆ ಅವಕಾಶ ನೀಡಿದೆ, ಎರಡು ಸರ್ಕಾರಗಳನ್ನು ರಚನೆ ಮಾಡಿದಂತಾಗುತ್ತದೆ. ಹೀಗಾಗಿ ವಿಶ್ವಾಸಮತಕ್ಕೆ ಅವಕಾಶ ನೀಡಿರುವ ಏಕ ಸದಸ್ಯ ಪೀಠದ ಆದೇಶವನ್ನು' ರದ್ದುಗೊಳಿಸಬೇಕು ಎಂದು ಕೇಂದ್ರ ಸರ್ಕಾರ ತನ್ನ ವಾದ ಮಂಡಿಸಿತು. ವಾದ ಆಲಿಸಿದ ಕೋರ್ಟ್ ವಿಶ್ವಾಸಮತಕ್ಕೆ ತಡೆ ನೀಡಿ ವಿಚಾರಣೆಯನ್ನು ಏಪ್ರಿಲ್ 6ಕ್ಕೆ ಮುಂದೂಡಿದೆ.