ಎನ್ ಐಎ ಪಾಕ್ ಭೇಟಿ ಪ್ರಸ್ತಾವನೆಯಿಂದ ಯಾವುದೇ ಪ್ರಯೋಜನವಿಲ್ಲ: ಶಿವಸೇನೆ

ಪಠಾಣ್ ಕೋಟ್ ದಾಳಿ ಸಂಬಂಧ ಈಗಾಗಲೇ ಪಾಕಿಸ್ತಾನ ತನಿಖಾ ತಂಡ ಭಾರತಕ್ಕೆ ಭೇಟಿ ನೀಡಿರುವುದು ಹಾಗೂ ಭಾರತ ಪಾಕಿಸ್ತಾನಕ್ಕೆ ಭೇಟಿ ನೀಡುವ ಪ್ರಸ್ತಾಪನೆಯೆಲ್ಲವೂ...
ಶಿವಸೇನೆ ನಾಯಕ ಸಂಜಯ್ ರಾವತ್ (ಸಂಗ್ರಹ ಚಿತ್ರ)
ಶಿವಸೇನೆ ನಾಯಕ ಸಂಜಯ್ ರಾವತ್ (ಸಂಗ್ರಹ ಚಿತ್ರ)

ನವದೆಹಲಿ: ಪಠಾಣ್ ಕೋಟ್ ದಾಳಿ ಸಂಬಂಧ ಈಗಾಗಲೇ ಪಾಕಿಸ್ತಾನ ತನಿಖಾ ತಂಡ ಭಾರತಕ್ಕೆ ಭೇಟಿ ನೀಡಿರುವುದು ಹಾಗೂ ಭಾರತ ಪಾಕಿಸ್ತಾನಕ್ಕೆ ಭೇಟಿ ನೀಡುವ ಪ್ರಸ್ತಾಪನೆಯೆಲ್ಲವೂ ಚಾಯ್ ಪೇ ಚರ್ಚಾ ಇದ್ದಂತೆ, ಇದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಶಿವಸೇನೆ ಗುರುವಾರ ಹೇಳಿಕೊಂಡಿದೆ.

ಪಾಕಿಸ್ತಾನ ತನಿಖಾ ತಂಡ ಭಾರತಕ್ಕೆ ಭೇಟಿ ನೀಡಿರುವುದರ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಶಿವಸೇನೆ ನಾಯಕ ಸಂಜಯ್ ರಾವತ್ ಅವರು, ಪಾಕಿಸ್ತಾನ ಭಾರತಕ್ಕೆ ಬಂದಿರುವುದು ಹಾಗೂ ಭಾರತ ಪಾಕಿಸ್ತಾನಕ್ಕೆ ಹೋಗುವ ಪ್ರಸ್ತಾವನೆಯೆಲ್ಲವೂ ಚಾಯ್ ಪೇ ಚರ್ಚಾ ಇದ್ದಂತೆ. ಇದು ಮುಂದುವರೆಯುತ್ತಲೇ ಇರುತ್ತದೆ ವಿನಃ ಇದರಿಂದ ಯಾವುದೇ ಫಲಿತಾಂಶ ಸಿಗುವುದಿಲ್ಲ ಎಂದು ಹೇಳಿದ್ದಾರೆ.

ಪಠಾಣ್ ಕೋಟ್ ವಾಯುನೆಲೆ ಮೇಲಿನ ಉಗ್ರರ ದಾಳಿ ಪ್ರಕರಣವನ್ನು ತನಿಖೆ ನಡೆಸಲು ಪಾಕಿಸ್ತಾನ ಜಂಟಿ ತನಿಖಾ ತಂಡ ಭಾರತಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದೆ. ಇದರಂತೆ ಭಾರತ ರಾಷ್ಟ್ರೀಯ ತನಿಖಾ ತಂಡ ಕೂಡ ಮುಂಬೈ ಉಗ್ರರ ದಾಳಿ ಪ್ರಕರಣ ಸಂಬಂಧಿಸಿದ ತನಿಖೆ ನಡೆಸಲು ಅನುಮತಿ ನೀಡಬೇಕೆಂದು ಪಾಕಿಸ್ತಾನದ ಬಳಿ ಪ್ರಸ್ತಾಪವೊಂದನ್ನು ಇಟ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com