

ಶ್ರೀನಗರ: ಪ್ರತ್ಯೇಕತಾವಾದಿ ಗೆರಿಲ್ಲಾಗಳು ಜಮ್ಮು-ಕಾಶ್ಮೀರದಲ್ಲಿ ಓರ್ವ ಮಹಿಳೆಯನ್ನು ಹತ್ಯೆ ಮಾಡಿದ್ದಾರೆ.
ಕಾಶ್ಮೀರದ ಪುಲ್ವಾಮಾದಲ್ಲಿ ಗೆರಿಲ್ಲಾಗಳು ಗುಂಡಿನ ದಾಳಿ ನಡೆಸಿದ್ದು, ಓರ್ವ ಮಹಿಳೆ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಗುಂಡೇಟು ತಗುಲುತ್ತಿದ್ದಂತೆಯೇ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಟ್ರಾಲ್ ಪ್ರದೇಶದಲ್ಲಿರುವ ಮನೆಯೊಂದಕ್ಕೆ ನುಗ್ಗಿದ ಭಯೋತ್ಪಾದಕರು ಗುಲಾಂ ಹಸನ್ ಪತ್ನಿ ಹಮೀದಾ ಬೇಗಮ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಹತ್ತಿರದಿಂದ ಗುಂಡಿನ ದಾಳಿ ನಡೆಸಿರುವುದರಿಂದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದರು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.