
ಕೊಲ್ಕತಾ: ಕೊಲ್ಕತ್ತಾದ ಬಾಬಾ ಬಜಾರ್ ನ ಗಣೇಶ್ ಟಾಕೀಸ್ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿದ್ದ ವಿವೇಕಾನಂದ ಫ್ಲೈಓವರ್ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೇರಿದ್ದು, ರಾತ್ರಿಯಿಡಿ ನಡೆದ ಕಾರ್ಯಾಚರಣೆಯಲ್ಲಿ 90 ಮಂದಿಯನ್ನು ರಕ್ಷಿಸಲಾಗಿದೆ.
ಉತ್ತರ ಕೊಲ್ಕತಾದಲ್ಲಿ ನಿನ್ನೆ ಮಧ್ಯಾಹ್ನ ಈ ದುರಂತ ಸಂಭವಿಸಿದ್ದು, ಇಲ್ಲಿಯವರೆಗೂ 24 ಮಂದಿ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. 100ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ.
ಪ್ರಸ್ತುತ ಅವಶೇಷಗಳಡಿ 150ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ(ಎನ್ಡಿಆರ್ಎಫ್) ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
Advertisement