
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ನೀತಿಗಳಲ್ಲಿ ಬದಲಾವಣೆ ಮಾಡಿಕೊಂಡಂತಿದ್ದು, ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕರನ್ನು ಭಾರತೀಯ ಪ್ರಜೆಗಳೆಂದು ಹೇಳಿದೆ.
ಕಾಶ್ಮೀರದ ಪ್ರತ್ಯೇಕತಾವಾದಿಗಳು ಭಾರತೀಯ ನಾಗರಿಕರಾಗಿದ್ದು, ಉಳಿದ ಎಲ್ಲಾ ನಾಗರಿಕರಂತೆಯೇ ಪ್ರಪಂಚದ ಯಾವುದೇ ನಾಯಕರನ್ನು ಭೇಟಿ ಮಾಡಬಹುದೆಂದು ಕೇಂದ್ರ ಸರ್ಕಾರ ಹೇಳಿದೆ. ಕಾಶ್ಮೀರ ಪ್ರತ್ಯೇಕತಾವಾದಿ ಸಯೀದ್ ಅಲಿ ಗಿಲಾನಿ ಶಾ ಬಸೀತ್ ಅವರನ್ನು ಭೇಟಿ ಮಾಡಿರುವ ಬಗ್ಗೆ ವಿದೇಶಾಂಗ ಇಲಾಖೆ ರಾಜ್ಯ ಸಚಿವ ವಿಕೆ ಸಿಂಗ್ ಅವರಿಗೆ ಪತ್ರವನ್ನು ಬರೆಯಲಾಗಿತ್ತು. ಈ ಬಗ್ಗೆ ಉತ್ತರಿಸಿರುವ ಸಿಂಗ್, ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದ್ದು ಅಲ್ಲಿರುವ ಎಲ್ಲಾ ನಾಗರಿಕರು ಭಾರತೀಯರೇ ಆಗಿದ್ದಾರೆ. ಆದ್ದರಿಂದ ಅವರು ಯಾವುದೇ ದೇಶದ ಪ್ರತಿನಿಧಿಗಳನ್ನು ಭೇಟಿ ಮಾಡಲು ಸ್ವತಂತ್ರರು ಎಂದು ವಿಕೆ ಸಿಂಗ್ ಉತ್ತರಿಸಿದ್ದಾರೆ.
ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆಯಲ್ಲಿ ಮೂರನೇ ವ್ಯಕ್ತಿಯ ಪ್ರವೇಶವನ್ನು ಭಾರತ ಒಪ್ಪುವುದಿಲ್ಲ ಎಂದು ವಿಕೆ ಸಿಂಗ್ ಸ್ಪಷ್ಟಪಡಿಸಿದ್ದಾರೆ.
Advertisement