ಪ್ರಿಯಾಂಕ ಅಥವಾ ರಾಹುಲ್ ಗಾಂಧಿ ಯನ್ನು ಉ.ಪ್ರ ಸಿಎಂ ಅಭ್ಯರ್ಥಿಯನ್ನಾಗಿ ಘೋಶಿಸುವುದರತ್ತ ಪ್ರಶಾಂತ್ ಕಿಶೋರ್ ಒಲವು

ದೇಶದ ಎಲ್ಲಾ ಭಾಗಗಳಲ್ಲೂ ವರ್ಚಸ್ಸು ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷಕ್ಕೆ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ ಮಹತ್ವದ್ದಾಗಿದ್ದು, ವಿಧಾನಸಭಾ ಚುನಾವಣೆಗೆ ರಣತಂತ್ರ ರೂಪಿಸುತ್ತಿದೆ.
ಪ್ರಿಯಾಂಕ ಗಾಂಧಿ, ರಾಹುಲ್ ಗಾಂಧಿ
ಪ್ರಿಯಾಂಕ ಗಾಂಧಿ, ರಾಹುಲ್ ಗಾಂಧಿ
Updated on: 

ನವದೆಹಲಿ: ದೇಶದ ಎಲ್ಲಾ ಭಾಗಗಳಲ್ಲೂ ವರ್ಚಸ್ಸು ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷಕ್ಕೆ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ ಮಹತ್ವದ್ದಾಗಿದ್ದು, ವಿಧಾನಸಭಾ ಚುನಾವಣೆಗೆ ರಣತಂತ್ರ ರೂಪಿಸುತ್ತಿದೆ.
ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್ ಪಕ್ಷ ಈಗಾಗಲೆ ಪ್ರಶಾಂತ್ ಕಿಶೋರ್ ಅವರನ್ನು ಸಂಪರ್ಕಿಸಿದ್ದು, ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಗೆ ಕೆಲವು ಸಲಹೆಗಳನ್ನು ನೀಡಿದ್ದಾರೆ. ಅದೇನೆಂದರೆ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನ ಗೆಲ್ಲಬೇಕೆಂದರೆ ಪ್ರಿಯಾಂಕ ಗಾಂಧಿ ಅಥವಾ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮಾಡುವುದು ಅಥವಾ ಬ್ರಾಹ್ಮಣ ಸಮುದಾಯದವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದು.
ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ, ಇಲ್ಲವೇ ಪ್ರಿಯಾಂಕಾ ಗಾಂಧಿ ಅವರು ಪ್ರಮುಖ ಪಾತ್ರ ವಹಿಸಬೇಕೆಂದು ಬಯಸಿರುವ ಪ್ರಶಾಂತ್ ಕಿಶೋರ್ ಈ ಇಬ್ಬರಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಸೂಕ್ತ, ಇಲ್ಲವೇ ಉತ್ತರ ಪ್ರದೇಶ ಕಾಂಗ್ರೆಸ್ ನ ಮುಂಚೂಣಿಯಲ್ಲಿರುವ ಬ್ರಾಹ್ಮಣ ಸಮುದಾಯದ ನಾಯಕರನ್ನು ಸಿಎಂ ಅಭ್ಯರ್ಥಿಯನ್ನಾಗಿ ಮಾಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪ್ರಶಾಂತ್ ಕಿಶೋರ್ ಅವರ ಅಭಿಪ್ರಾಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಉತ್ತರ ಪ್ರದೇಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ಚಿಂತನೆ ನಡೆಸಿದ್ದು ಈ ಬಗ್ಗೆ ಮೇ. 19 ರಂದು ಅಧಿಕೃತ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com