ಸಾಂದರ್ಭಿಕ ಚಿತ್ರ
ದೇಶ
ಮಾಲ್ಡಾದಲ್ಲಿ ಹಿಂಸಾಚಾರ; 4 ಟಿಎಂಸಿ ಕಾರ್ಯಕರ್ತರು ಸಾವು: 'ಕೈ'ಯಿಂದ ಬಾಂಬ್ ದಾಳಿ?
ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ನಡೆದ ಚನಾವಣೋತ್ತರ ಹಿಂಸಾಚಾರದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ)ನ ನಾಲ್ವರು ಕಾರ್ಯಕರ್ತರು ಮೃತಪಟ್ಟಿದ್ದು, ಟಿಎಂಸಿ...
ಮಾಲ್ಡಾ: ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ನಡೆದ ಚನಾವಣೋತ್ತರ ಹಿಂಸಾಚಾರದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ)ನ ನಾಲ್ವರು ಕಾರ್ಯಕರ್ತರು ಮೃತಪಟ್ಟಿದ್ದು, ಟಿಎಂಸಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಕಚ್ಚಾ ಬಾಂಬ್ ಎಸದಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಾಂಗ್ರೆಸ್ ಕಾರ್ಯಕರ್ತರ ತಮ್ಮ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ ಎಂದು ಟಿಎಂಸಿ ಕಾರ್ಯಕರ್ತರು ಆರೋಪಿಸಿದ್ದಾರೆ. ಆದರೆ ತಮ್ಮ ಮೇಲೆ ಬಾಂಬ್ ಎಸೆದಿದ್ದಾರೆ ಎಂಬ ಟಿಎಂಸಿ ಕಾರ್ಯಕರ್ತರ ಆರೋಪವನ್ನು ಕಾಂಗ್ರೆಸ್ ತಳ್ಳಿಹಾಕಿದೆ.
ಕಾಂಗ್ರೆಸ್ ಹಾಗೂ ಟಿಎಂಸಿ ಕಾರ್ಯಕರ್ತರ ನಡುವಿನ ಕಾಳಗದಲ್ಲಿ, ನಾಲ್ವರು ಟಿಎಂಸಿ ಕಾರ್ಯಕರ್ತರ ಸಾವನ್ನಪ್ಪಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಶನಿವಾರ ಪಶ್ಚಿಮ ಬಂಗಾಳದಲ್ಲಿ ನಡೆದ ಐದನೇ ಮತ್ತು ಉಪಾಂತ್ಯ ಹಂತದ ವಿಧಾನಸಭಾ ಚುನಾವಣೆಯಲ್ಲಿ ಶೇ.78.25 ಮತದಾನವಾಗಿತ್ತು. ಶನಿವಾರ ಮತದಾನ ಮುಗಿಯುವಷ್ಟರೊಳಗಾಗಿ ಸುಮಾರು 186 ಮಂದಿಯನ್ನು ಚುನಾವಣಾ ಅಕ್ರಮಗಳಿಗಾಗಿ ಮತ್ತು ಅಲ್ಲಲ್ಲಿ ಸ್ಫೋಟಿಸಿದ ಹಿಂಸೆಗಾಗಿ ಬಂಧಿಸಲಾಗಿತ್ತು. ಈ ಹಿಂಸೆಗಳಲ್ಲಿ ಸುಮಾರು 15 ಮಂದಿ ಗಾಯಗೊಂಡಿದ್ದರು.
ಪಶ್ಚಿಮ ಬಂಗಾಲ ವಿಧಾನಸಭೆ ಚುನಾವಣಾ ಫಲಿತಾಂಶವು ಮೇ 19ರಂದು ಬಹಿರಂಗವಾಗಲಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ