ಕಳ್ಳತನ ಆರೋಪ: ಮುಂಬೈ ಪೊಲೀಸ್ ಠಾಣೆಯಲ್ಲಿ ಬಂಧಿತ ಯುವಕ ಆತ್ಮಹತ್ಯೆ

ಮನೆಯಲ್ಲಿ ಕಳ್ಳತನ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದ್ದ 20 ವರ್ಷದ ಯುವಕ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ...
ಆತ್ಮಹತ್
ಆತ್ಮಹತ್
Updated on: 

ಮುಂಬೈ: ಮನೆಯಲ್ಲಿ ಕಳ್ಳತನ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದ್ದ 20 ವರ್ಷದ ಯುವಕ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಬಂಧಿತ ಯುವಕ ಅಮಿತ್ ರವಿ ರಾಥೋಡ್ ತನ್ನ ಸರ್ಟ್ ನಿಂದ ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳ್ಳತನ ಆರೋಪದ ಮೇಲೆ ಕಳೆದ ವಾರ ಬಂಧಿಸಲಾಗಿದ್ದ ಅಮಿತ್ ರವಿ ರಾಥೋಡ್ ನನ್ನು ಮುಲುಂದ್ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿತ್ತು. ಆತನ ವಿರುದ್ಧ ಸೆಕ್ಷನ್ 454, 457 ಮತ್ತು 380ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಘಟನೆ ಬಳಿಕ ಅಮಿತ್ ರವಿ ನನ್ನು ಮುಂಬೈನ ಜೆಜೆ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಇನ್ನು ಪ್ರಕರಣ ಕುರಿತಂತೆ ಕ್ರೈಂ ಬ್ರಾಂಚ್ ತನಿಖೆ ಕೈಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com