ಲಾಲೂ ಪ್ರಸಾದ್ ಯಾದವ್ ಮತ್ತು ಅರವಿಂದ್ ಕೇಜ್ರಿವಾಲ್
ದೇಶ
ಬಲವಂತವಾಗಿ ಅಪ್ಪಿಕೊಳ್ಳಲು ಕೇಜ್ರಿವಾಲ್ ಏನು ಸಿನಿಮಾ ನಟಿಯಾ? ಲಾಲೂ ಪ್ರಶ್ನೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಲವಂತವಾಗಿ ಎಳೆದು ತಬ್ಬಿಕೊಳ್ಳಲು ಅವರೇನು ಸಿನಿಮಾ ನಟಿಯಾ ಎಂದು ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ...
ಪಾಟ್ನಾ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಲವಂತವಾಗಿ ಎಳೆದು ತಬ್ಬಿಕೊಳ್ಳಲು ಅವರೇನು ಸಿನಿಮಾ ನಟಿಯಾ ಎಂದು ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹೇಳಿದ್ದಾರೆ.
ವಿವಿಐಪಿ ಹೆಲಿಕಾಪ್ಟರ್ ಖರೀದಿ ಪ್ರಕರಣ ಸಂಬಂಧಪಟ್ಟಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಬಂಧಿಸುವಂತೆ ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿರುವ ಅರವಿಂದ್ ಕೇಜ್ರಿವಾಲ್ ಮಿತಿ ಮೀರಿ ವರ್ತಿಸುತ್ತಿದ್ದಾರೆ ಎಂದು ಲಾಲೂ ಪ್ರಸಾದ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಇನ್ನೂ ನಿತೀಶ್ ಕುಮಾರ್ ಬಿಹಾರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಕೇಜ್ರಿವಾಲ್ ಅವರನ್ನು ಎಳೆದುಕೊಂಡು ಲಾಲೂ ಪ್ರಸಾದ್ ಯಾದವ್ ಅಪ್ಪಿಕೊಂಡಿದ್ದ ವಿಡಿಯೋ ವೈರಲ್ ಆಗಿತ್ತು. ಈ ಸಂಬಂಧ ಕೇಜ್ರಿವಾಲ್ ಅವರನ್ನು ಮಾಧ್ಯಮಗಳು ಪ್ರಶ್ನಿಸಿದಾಗ, ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ್ ನನ್ನನ್ನು ಬಲವಂತವಾಗಿ ಎಳೆದು ತಬ್ಬಿಕೊಂಡಿದ್ದರು ಎಂದು ಹೇಳಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ