
ನವದೆಹಲಿ: ನ್ಯಾಯಮೂರ್ತಿಗಳ ನೇಮಕಾತಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, ದೇಶಾದ್ಯಂತ ನ್ಯಾಯಮೂರ್ತಿಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ಉತ್ತರ ನೀಡಿರುವ ರಾಜನಾಥ್ ಸಿಂಗ್, ನ್ಯಾಯಮೂರ್ತಿಗಳ ಸಂಖ್ಯೆಯನ್ನು ಹೆಚ್ಚಿಸುವ ವಿಷಯವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಗೃಹ ಸಚಿವರು ಸಂಸತ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.
ಕಳೆದ ವಾರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ್ದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾ. ಟಿಎಸ್ ಠಾಕೂರ್ ನ್ಯಾಯಾಧೀಶರ ಸಂಖ್ಯೆ ಕಡಿಮೆಯಾಗಿದ್ದು, ನ್ಯಾಯವಿತರಣೆ ವಿಳಂಬವಾಗುತ್ತಿದೆ. ಇದು ದೇಶದ ಅಭಿವೃದ್ಧಿ ಮೇಲೆ ಪರಿಣಾಮ ಬೀರಲಿದೆ ಎಂದು ಪ್ರಧಾನಿ ಎದುರಲ್ಲೇ ಕಣ್ಣೀರಿಟ್ಟಿದ್ದರು. ನ್ಯಾ. ಠಾಕೂರ್ ಅವರ ಭಾಷಣದ ನಂತರ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ನ್ಯಾಯಾಧೀಶರ ಸಂಖ್ಯೆಯನ್ನು ಹೆಚ್ಚಿಸಿ ನ್ಯಾಯಾಂಗ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು.
Advertisement