ಬಿಜೆಪಿ ಕಾರ್ಯಕರ್ತರಿಗೆ ನೀಡುವ ಕಿರುಕುಳ ಮುಂದುವರೆದರೆ ಪೊಲೀಸರಿಗೆ ಗುಂಡಿಕ್ಕುತ್ತೇನೆ: ಸಾಕ್ಷಿ ಮಹಾರಾಜ್

ವಿವಾದಗಳಿಂದಲೇ ಸುದ್ದಿಯಲ್ಲಿರುವ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸಾಕ್ಷಿ ಮಹಾರಾಜ್
ಸಾಕ್ಷಿ ಮಹಾರಾಜ್

ಲಖನೌ: ವಿವಾದಗಳಿಂದಲೇ ಸುದ್ದಿಯಲ್ಲಿರುವ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡುವ ಪೊಲೀಸರಿಗೆ ಗುಂಡಿಕ್ಕುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಆಜ್ ತಕ್ ನ ವರದಿಯ ಪ್ರಕಾರ, ಉತ್ತರ ಪ್ರದೇಶದ ಪೊಲೀಸರು ಪಕ್ಷದ ಕಾರ್ಯಕರ್ತರಿಗೆ ಕಿರುಕುಳ ನೀಡುವುದನ್ನು ಮುಂದುವರೆಸಿದರೆ ಅಂಥಹ ಅಧಿಕಾರಿಗಳನ್ನು ಶೂಟ್ ಮಾಡುವುದಾಗಿ  ಎಚ್ಚರಿಕೆ ನೀಡಿದ್ದಾರೆ.
ಮೈನ್ ಪುರಿಯ ಬಿಜೆಪಿ ಉಪಾಧ್ಯಕ್ಷರ ನಿವಾಸಕ್ಕೆ ಭೇಟಿ ನೀಡಿದ ವೇಳೆ ಸಾಕ್ಷಿ ಮಹಾರಾಜ್ ಈ ಹೇಳಿಕೆ ನೀಡಿದ್ದಾರೆ. ಉತ್ತರ ಪ್ರದೇಶದ ಮೈನ್ ಪುರಿಯ ಬಿಜೆಪಿ ಉಪಾಧ್ಯಕ್ಷರಿಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಾಕ್ಷಿ ಮಹಾರಾಜ್ ಈ ಹೇಳಿಕೆ ನೀಡಿದ್ದಾರೆ. ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿರುವ ಸಾಕ್ಷಿ ಮಹಾರಾಜ್, ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ನೇತೃತ್ವದ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಸಮಾಜಘಾತುಕ ಶಕ್ತಿಗಳನ್ನು ಉತ್ತೇಜಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com