ಬಸ್ ದುರಂತ
ದೇಶ
ಛತ್ತೀಸ್‌ಗಢದಲ್ಲಿ ಸೇತುವೆಯಿಂದ ಕೆಳಗುರುಳಿದ ಬಸ್: 16 ಸಾವು
ಕಳೆದ ರಾತ್ರಿ 10.30ರ ಸುಮಾರಿಗೆ ಬಸ್ಸೊಂದು ಸೇತುವೆಯಿಂದ ಕೆಳಗುರುಳಿದ ಪರಿಣಾಮ 16 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಛತ್ತೀಸ್‌ಗಢದ ರಾಯಪುರದ...
ರಾಯಪುರ: ಕಳೆದ ರಾತ್ರಿ 10.30ರ ಸುಮಾರಿಗೆ ಬಸ್ಸೊಂದು ಸೇತುವೆಯಿಂದ ಕೆಳಗುರುಳಿದ ಪರಿಣಾಮ 16 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಛತ್ತೀಸ್‌ಗಢದ ರಾಯಪುರದ ಬಲರಾಮಪುರ ಜಿಲ್ಲೆಯಲ್ಲಿ ಸಂಭವಿಸಿದೆ.
ಖಾಸಗಿ ಬಸ್ ಜಾರ್ಖಂಡ್‌ನ ಗಢವಾದಿಂದ ಛತ್ತೀಸ್‌ಗಢದ ರಾಜಧಾನಿ ರಾಯಪುರಕ್ಕೆ ಬರುತ್ತಿತ್ತು. ಬಸ್ ದಳಧೋವಾ ಘಾಟ್‌ನ ಕಿರಿದಾದ ಸೇತುವೆ ಮೇಲೆ ಬರುತ್ತಿದ್ದಾಗ ಚಾಲ ಎದುರಿಗೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಈ ದುರ್ಘಟನೆ ಸಂಭವಿಸಿದೆ.
ಇನ್ನು ಬಸ್ ಕೆಳಗೆ ಉರುಳಿದ ತಕ್ಷಣ 13 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 53 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆ ಪೈಕಿ ಮೂವರು ಆಸ್ಪತ್ರೆಯಲ್ಲಿಂದು ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದುರ್ಘಟನೆ ಬಳಿಕ ಮುಖ್ಯಮಂತ್ರಿ ರಮಣ್ ಸಿಂಗ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಗೆ ಸಾಂತ್ವನ ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ