ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಗೋವಾ ಶಾಸಕನ ವಿರುದ್ಧ ಎಫ್ ಐ ಆರ್
ಪಣಜಿ: ಗೋವಾದ ಶಾಸಕ ಅಟಾನಾಯಸಿಯೋ ಮಾನ್ಸರಾಟ್ ಅಲಿಯಾಸ್ ಬಾಬುಷ್ ಮಾನ್ಸರಾಟ್ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ದೂರು ದಾಖಲಾಗಿದೆ.
ಬಾಬುಷ್ ತಮ್ಮ ಕ್ಷೇತ್ರ ಅಪ್ರಾಪ್ತ ಬಾಲಕಿಯ ಮೇಲೆ ಮಾರ್ಚ್ ತಿಂಗಳಿನಲ್ಲಿ ಅತ್ಯಾಚಾರವರೆಸಗಿದ್ದಾರೆ ಎಂದು ದೂರು ದಾಖಲಾಗಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಸಂತ್ರಸ್ತ ಬಾಲಕಿ ಬಾಬುಷ್ ಅವರಿಗೆ ಸೇರಿದ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಮಾರ್ಚ್ ತಿಂಗಳಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ಆಕೆಯ ಮೇಲೆ ಅತ್ಯಾಚಾರವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ನನ್ನ ವಿರುದ್ಧ ಪಿತೂರಿ ನಡೆಸಲಾಗುತ್ತಿದ್ದು, ಸುಳ್ಳು ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲಾಗುತ್ತಿದೆ. ಬಾಲಕಿ ನನ್ನ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದಳು, ಹಣ ಕಳ್ಳತನದ ಆರೋಪದ ಮೇಲೆ ಆಕೆಯನ್ನು ಕೆಲಸದಿಂದ ತೆಗೆದು ಹಾಕಿದ್ದೆ. ಈಗ ಆಕೆ ನನ್ನ ವಿರುದ್ಧ ಸುಳ್ಳು ದೂರು ದಾಖಲಿಸಿದ್ದಾಳೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಬಾಬುಷ್ ವಿರುದ್ಧ ಐಪಿಸಿ ಸೆಕ್ಷನ್ 375ರ ಪ್ರಕಾರ ಎಫ್ಐಆರ್ ದಾಖಲಾಗಿದೆ.
ಬಾಬುಷ್ ಸೇಟ್ ಕ್ರೂಜ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು, ನಂತರ ಬಿಜೆಪಿಯೊಂದಿಗೆ ಗುರುತಿಸಿಕೊಂಡ ಕಾರಣ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿತ್ತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ