
ನವದೆಹಲಿ: ಏಪ್ರಿಲ್ 28 ರಂದು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿನಿಯಾಗಿದ್ದ ಜಿಶಾ ಎಂಬಾಕೆಯನ್ನು ಪೈಶಾಚಿಕ ರೀತಿಯಲ್ಲಿ ಅತ್ಯಾಚರವೆಸಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಕೇಂದ್ರ ಸರ್ಕಾರ ಕೇರಳ ಸರ್ಕಾರಕ್ಕೆ ಸೂಚನೆ ನೀಡಿದೆ.
ಸಂಸತ್ ನಲ್ಲಿ ಜಿಶಾ ಅತ್ಯಾಚಾರ ಪ್ರಕರಣ ಪ್ರತಿಧ್ವನಿಸಿ ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೇರಳ ಸರ್ಕಾರದಿಂದ ವಿಸ್ತೃತ ವರದಿ ನೀಡುವಂತೆ ಕೇಳಿದೆ. ಕೇಂದ್ರ ಸರ್ಕಾರದೊಂದಿಗೆ ರಾಷ್ಟ್ರೀಯ ಮಾನವಹಕ್ಕು ಆಯೋಗ ಸಹ ಕೇರಳ ಸರ್ಕಾರಕ್ಕೆ ನೊಟೀಸ್ ನೀಡಿದ್ದು ವರದಿ ನೀಡುವಂತೆ ಸೂಚನೆ ನೀಡಿದೆ. ರಾಜ್ಯಸಭೆಯಲ್ಲಿ ಮಾತನಾಡಿದ ಸಾಮಾಜಿಕ ನ್ಯಾಯ ಸಚಿವ ಥಾವರ್ ಚಂದ್ ಗೆಹ್ಲೋಟ್, ಜಿಶಾ ನಿವಾಸಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ಸಿಪಿಎಂ ನ ಸದಸ್ಯ ಸಿಪಿ ನಾರಾಯಣನ್ ರಾಜ್ಯಸಭೆಯಲ್ಲಿ ಜಿಶಾ ಅತ್ಯಾಚಾರ ಪ್ರಕರಣವನ್ನು ಪ್ರಸ್ತಾಪಿಸಿ ಕೇಂದ್ರ ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.
Advertisement