ಜೆಎನ್ ಯು ವಿದ್ಯಾರ್ಥಿ ಕನ್ಹಯ್ಯಾ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜವಾಹಾರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್...
ಅಸ್ವಸ್ಥಗೊಂಡ ಕನ್ಹಯ್ಯಾ ಕುಮಾರ್ ಆಸ್ಪತ್ರೆಗೆ ದಾಖಲು
ಅಸ್ವಸ್ಥಗೊಂಡ ಕನ್ಹಯ್ಯಾ ಕುಮಾರ್ ಆಸ್ಪತ್ರೆಗೆ ದಾಖಲು
ನವದೆಹಲಿ: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜವಾಹಾರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್ ತೀವ್ರವಾಗಿ ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಏಪ್ರಿಲ್ 28ರಿಂದ ಕನ್ಹಯ್ಯಾ ಸೇರಿದಂತೆ 19 ಮಂದಿ ವಿದ್ಯಾರ್ಥಿಗಳು ಅನಿರ್ಧಿಷ್ಟಾವದಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ತೀವ್ರವಾಗಿ ಅಸ್ವಸ್ಥಗೊಂಡ ಕನ್ಹಯ್ಯಾ ಇಂದು ಬೆಳಿಗ್ಗೆ ವಾಂತಿ ಮಾಡಿಕೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಕ್ತದೊತ್ತಡದಲ್ಲಿ ಏರುಪೇರಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 
ಫೆಬ್ರವರಿ 9ರಂದು ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರ ಸಂಬಂಧ ವಿಶ್ವವಿದ್ಯಾಲಯ ನೇಮಿಸಿದ್ದ ಆಂತರಿಕ ಸಮಿತಿ ನೀಡಿದ ವರದಿ ಅನ್ವಯ ಶಿಸ್ತು ಕ್ರಮ ಕೈಗೊಂಡಿರುವುದನ್ನು ವಿರೋಧಿಸಿ ಕನ್ಹಯ್ಯಾ, ಉಮರ್ ಖಾಲೀದ್ ಸೇರಿದಂತೆ 19 ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. 
ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಮೂರಿಂದ ನಾಲ್ಕು ಕೆಜಿ ತೂಕ ಕಡಿಮೆಯಾಗಿದೆ. ಕಳೆದ 8 ದಿನಗಳಿಂದ ಉಪವಾಸ ನಡೆಸುತ್ತಿದ್ದರು, ಜೆಎನ್ ಯು ಆಡಳಿತ ಮಂಡಳಿ ನಮ್ಮ ಬೇಡಿಕೆಗೆ ಮಣಿಯುತ್ತಿಲ್ಲ ಎಂದು ಜೆಎನ್ ಯು ವಿದ್ಯಾರ್ಥಿ ಉಮರ್ ಖಾಲೀದ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com