ಬರ ಚರ್ಚೆಗೆ ಕರ್ನಾಟಕ, ಮಹಾರಾಷ್ಟ್ರ, ಯುಪಿ ಮುಖ್ಯಮಂತ್ರಿಗಳಿಗೆ ಪ್ರಧಾನಿ ಆಹ್ವಾನ

ಬರಗಾಲ ಮತ್ತು ನೀರಿನ ಕೊರತೆ ತೀವ್ರವಾಗಿ ಕಾಡುತ್ತಿರುವ ರಾಜ್ಯಗಳಾದ ಕರ್ನಾಟಕ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶಗಳಲ್ಲಿನ ಪರಿಸ್ಥಿತಿ ಕುರಿತು ಚರ್ಚೆ ನಡೆಸಲು ಇದೇ ಶನಿವಾರ...
ಪ್ರಧಾನ ಮಂತ್ರಿ ನರೇಂದ್ರ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ
Updated on: 

ನವದೆಹಲಿ: ಬರಗಾಲ ಮತ್ತು ನೀರಿನ ಕೊರತೆ ತೀವ್ರವಾಗಿ ಕಾಡುತ್ತಿರುವ ರಾಜ್ಯಗಳಾದ ಕರ್ನಾಟಕ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶಗಳಲ್ಲಿನ ಪರಿಸ್ಥಿತಿ ಕುರಿತು ಚರ್ಚೆ ನಡೆಸಲು ಇದೇ ಶನಿವಾರ ಬರುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಲ್ಲಿನ ಮುಖ್ಯಮಂತ್ರಿಗಳಿಗೆ ಆಹ್ವಾನಿಸಿದ್ದಾರೆ.

ಮೂರೂ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರತ್ಯೇಕವಾಗಿ ಚರ್ಚೆ, ಮಾತುಕತೆ ನಡೆಸಿ ಆಯಾ ರಾಜ್ಯಗಳಲ್ಲಿ ಬರಗಾಲ ಪರಿಸ್ಥಿತಿ ಯಾವ ರೀತಿ ಕಾಡುತ್ತಿದೆ, ಏನು ಪರಿಹಾರ ಕೈಗೊಳ್ಳಬಹುದು ಎಂಬ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಬರಗಾಲದಿಂದ ತತ್ತರಿಸಿ ಹೋಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ನೆರವು ನೀಡುತ್ತದೆಯಾದರೂ ಪರಿಸ್ಥಿತಿಯನ್ನು ಮೂಲದಿಂದ ಆಯಾ ರಾಜ್ಯಗಳೇ ಎದುರಿಸಬೇಕೆಂದು ಕೇಂದ್ರ ಈಗಾಗಲೇ ಸ್ಪಷ್ಟಪಡಿಸಿದೆ.

ಬರಗಾಲ ಮತ್ತು ನೀರಿನ ಕೊರತೆಯಿಂದ ಬಳಲುತ್ತಿರುವ ಜನರಿಗೆ ತಳಮಟ್ಟದಲ್ಲಿ ನೆರವನ್ನು ಒದಗಿಸುವುದು ರಾಜ್ಯ ಸರ್ಕಾರಗಳಾದರೆ ಕೇಂದ್ರ ಸರ್ಕಾರ ಉಸ್ತುವಾರಿ ನೋಡಿಕೊಳ್ಳುತ್ತದೆ ಎಂದು ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ರಾಜ್ಯಸಭೆಯಲ್ಲಿ ಇತ್ತೀಚೆಗೆ ಬರ ಕುರಿತ ಚರ್ಚೆ ಸಂದರ್ಭದಲ್ಲಿ ಹೇಳಿಕೆ ನೀಡಿದ್ದರು.

ದೇಶದ ರೈತರ ಹಿತ ಕಾಪಾಡುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಎಲ್ಲಾ ರಾಜ್ಯಗಳಿಗೂ ಸಮಪ್ರಮಾಣದಲ್ಲಿ ನೆರವು ಒದಗಿಸುತ್ತದೆ ಎಂದು ರಾಧಾ ಮೋಹನ್ ಸಿಂಗ್ ಹೇಳಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇಬ್ಬರು ಅಧಿಕಾರಿಗಳೊಂದಿಗೆ ಬರ ಕುರಿತು ಚರ್ಚಿಸಲು ದೆಹಲಿಗೆ ಆಗಮಿಸುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com