

ನವದೆಹಲಿ: ಕಾಂಗ್ರೆಸ್ ಆಯೋಜಿಸಿದ್ದ ‘ಪ್ರಜಾಪ್ರಭುತ್ವ ಉಳಿಸಿ ರ‍್ಯಾಲಿ’ಯಲ್ಲಿ ರಾಬರ್ಟ್ ವಾದ್ರಾ ಅವರ ಚಿತ್ರವಿದ್ದ ಬ್ಯಾನರ್ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಅರುಣಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿರುವ ಕೇಂದ್ರದ ನಿಲುವನ್ನು ಖಂಡಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ‘ಪ್ರಜಾತಂತ್ರ ಉಳಿಸಿ’ ಎಂಬ ಘೊಷಣೆ ಮೊಳಗಿತು. ಈ ಸಂದರ್ಭ ಪ್ರದರ್ಶನಗೊಂಡ ಬ್ಯಾನರ್ನಲ್ಲಿ ವಾದ್ರಾ ರಾರಾಜಿಸಿದ್ದು ಹಲವರ ಕೆಂಗಣ್ಣಿಗೆ ಗುರಿಯಾಗಿದೆ.
ಹರ್ಯಾಣಾದಲ್ಲಿ ರಿಯಲ್ ಎಸ್ಟೇಟ್ ದಂಧೆ ನಡೆಸುವ ಮೂಲಕ ವಿವಾದಿತ ವ್ಯಕ್ತಿಯಾಗಿದ್ದ ವಾದ್ರಾ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಇರುವ ಬ್ಯಾನರ್ನಲ್ಲಿ ವಾದ್ರಾ ಭಾವಚಿತ್ರವೂ ಇರುವುದು ಅಸಮಾಧಾನಕ್ಕೆ ಕಾರಣವಾಗಿದೆ.