ಖಾಸಗಿ ಕಾಲೇಜುಗಳು ಎಂಬಿಬಿಎಸ್ ಮತ್ತು ಬಿಡಿಎಸ್ ಪ್ರವೇಶ ಪರೀಕ್ಷೆ ನಡೆಸುವಂತಿಲ್ಲ: ಸುಪ್ರೀಂ

ದೇಶಾದ್ಯಂತ ಇರುವ ಖಾಸಗಿ ವೈದ್ಯಕೀಯ ಕಾಲೇಜುಗಳು ಯಾವುದೇ ಪರೀಕ್ಷೆ ನಡೆಸಲು ಅನುಮತಿ ಇಲ್ಲ ಎಂದು ಸುಪ್ರೀಂಕೋರ್ಟ್...
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ದೇಶಾದ್ಯಂತ ಇರುವ ಖಾಸಗಿ ವೈದ್ಯಕೀಯ ಕಾಲೇಜುಗಳು ಎಂಬಿಬಿಎಸ್ ಮತ್ತು ಬಿಡಿಎಸ್ ಪರೀಕ್ಷೆ ನಡೆಸಲು ಅನುಮತಿ ಇಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. 
ನ್ಯಾಯಮೂರ್ತಿ ಎ ಆರ್ ದಾವೆ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ಅನುದಾನರಹಿತ ಖಾಸಗಿ ಕಾಲೇಜುಗಳಿಗೆ ಪರೀಕ್ಷೆ ನಡೆಸಲು ಅನುಮತಿ ಇಲ್ಲ ಎಂದು ಆದೇಶಿಸಿದೆ. 
ಗುರುವಾರ ಎಂಬಿಬಿಎಸ್ ಮತ್ತು ಬಿಡಿಎಸ್ ಕೋರ್ಸುಗಳ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದ ವಿಷಯದ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್, ಆಯಾ ರಾಜ್ಯಗಳಿಗಳಿಗೆ ಎಂಬಿಬಿಎಸ್ ಮತ್ತು ಬಿಡಿಎಸ್ ಕೋರ್ಸ್ ಗಳ ವೈದ್ಯಕೀಯ ಅರ್ಹತಾ ಪ್ರವೇಶ ಪರೀಕ್ಷೆ ನಡೆಸುವ ಅವಕಾಶ ನೀಡುವುದರ ಬಗ್ಗೆ ಅಭಿಪ್ರಾಯ ತಿಳಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗೆ ಸೂಚಿಸಿದ್ದು, ಮುಂದಿನ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ. 
ಮೇ 1ರಂದು ಅಖಿಲ ಭಾರತ ಪೂರ್ವ ವೈದ್ಯಕೀಯ/ಪೂರ್ವ ದಂತ ವೈದ್ಯಕೀಯ ಪರೀಕ್ಷೆ(ಎಐಪಿಎಂಟಿ)ಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಜು.24ರಂದು ನಡೆಯಲಿರುವ ಎರಡನೇ ಹಂತದ ನೀಟ್ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಬಹುದೇ ಎನ್ನುವ ಬಗ್ಗೆಯೂ ವಿವರ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ನ್ಯಾಯಪೀಠ ಸೂಚಿಸಿದೆ. 
ರಾಜ್ಯದಲ್ಲಿ ನಡೆಯುವ ಪರೀಕ್ಷೆಗಳಲ್ಲಿ ತಮಗೆ ಹೆಚ್ಚಿನ ಅವಕಾಶಗಳು ಸಿಗಬಹುದೆಂದು ನಂಬಿಕೆ ಇಟ್ಟು ಅದರ ಮೇಲೆಯೇ ಗಮನವಿಟ್ಟಿದ್ದ ಕೆಲವು ವಿದ್ಯಾರ್ಥಿಗಳು ಎಐಪಿಎಂಟಿ ಪರೀಕ್ಷೆಗೆ ಗಂಭೀರವಾಗಿ ಸಿದ್ಧತೆ ನಡೆಸದೆ ಇರುವ ಸಾಧ್ಯತೆಗಳಿರುವುದರಿಂದ ಅವರಿಗೆ ನೀಟ್ 2ಗೆ ಹಾಜರಾಗಲು ಅವಕಾಶ ನೀಡಬೇಕು ಎಂದು ಪೀಠ ಅಭಿಪ್ರಾಯಪಟ್ಟಿತು. 
ಸಿಬಿಎಸ್ ಇ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿಂಕಿ ಆನಂದ್ ''ಇದು ಅಸಾಧ್ಯವೆಂದು ಹೇಳಲಾಗುದು. ಆದರೆ, ತುಂಬಾ ಕಷ್ಟವಾಗಬಹುದು'' ಎಂದ ಅವರು, ನೀಟ್ 1ಗೆ 6 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು ಎಂದು ತಿಳಿಸಿದ್ದಾರೆ. 
ಇನ್ನು ಗುಜರಾತ್, ಮಹಾರಾಷ್ಟರ್, ಆಂಧ್ರಪ್ರದೇಶ, ಕೇರಳ, ಅಸ್ಸಾಂ, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಹಲವು ರಾಜ್ಯಗಳ ಪ್ರತಿನಿಧಿಗಳು ನೀಟ್ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕೋರ್ಟ್ ಕೇಂದ್ರ ಮತ್ತು ಸಿಬಿಎಸ್ ಇಗಳಿಂದ ಅಭಿಪ್ರಾಯವನ್ನು ಕೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com