

ನವದೆಹಲಿ: ಕೇಂದ್ರ ಎನ್ ಡಿ ಎ ಸರ್ಕಾರದ ವಿರುದ್ದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಲೋಕತಂತ್ರ ಬಚಾವೋ ಯಾತ್ರೆ ಹಮ್ಮಿಕೊಳ್ಳಲಾಗಿದೆ.
ಅರುಣಾಚಲಪ್ರದೇಶ ಮತ್ತು ಉತ್ತರಾಖಂಡ್‌ನಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಿರುವುದನ್ನು ವಿರೋಧಿಸಿ ಕಾಂಗ್ರೆಸ್ ಇಂದು ನವದೆಹಲಿಯಲ್ಲಿ 'ಪ್ರಜಾಪ್ರಭುತ್ವ ಉಳಿಸಿ' ಜಂತರ್ ಮಂತರ್ ನಿಂದ ಸಂಸತ್ ಭವನದ ವರಗೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ,
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನೇತೃತ್ವದಲ್ಲಿ ಈ ಬೃಹತ್ ಮೆರವಣಿಗೆ ನಡೆಯುತ್ತಿದ್ದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಬರಗಾಲದಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೂ ಕೇಂದ್ರ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಾಗ್ಧಾಳಿ ನಡೆಸಿದ್ದಾರೆ.
ಇದೇ ವೇಳೆ ಬಿಜೆಪಿ ಕೂಡ ಹಿರಿಯ ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ ವಿರುದ್ಧ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಲಿದೆ.