ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಪ್ ಪ್ರತಿಭಟನೆ: 300ಕ್ಕೂ ಹೆಚ್ಚು ಬೆಂಬಲಿಗರ ಬಂಧನ

ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಆಮ್ ಆದ್ಮಿ ಪಕ್ಷ ಪ್ರತಿಭಟನೆ ನಡೆಸುತ್ತಿದ್ದು, 300ಕ್ಕೂ ಹೆಚ್ಚು ಆಪ್ ಬೆಂಬಲಿಗರನ್ನು ಪೊಲೀಸರು...
ಪ್ರತಿಭಟನಾ ರ್ಯಾಲಿ ಹೊರಟ ಆಪ್ ಕಾರ್ಯಕರ್ತರ ಬಂಧನ
ಪ್ರತಿಭಟನಾ ರ್ಯಾಲಿ ಹೊರಟ ಆಪ್ ಕಾರ್ಯಕರ್ತರ ಬಂಧನ
Updated on: 
ನವದೆಹಲಿ: ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಆಮ್ ಆದ್ಮಿ ಪಕ್ಷ ಪ್ರತಿಭಟನೆ ನಡೆಸುತ್ತಿದ್ದು, 300ಕ್ಕೂ ಹೆಚ್ಚು ಆಪ್ ಬೆಂಬಲಿಗರನ್ನು ಪೊಲೀಸರು ಬಂಧಿಸಿದ್ದಾರೆ. 
ಬಿಜೆಪಿ-ಕಾಂಗ್ರೆಸ್ ಮೈತ್ರಿಯಾಗಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಆಪ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದವರೆಗೆ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿತ್ತು. ಜಂತರ್ ಮಂತರ್ ನಿಂದ ಪ್ರತಿಭಟನಾ ರ್ಯಾಲಿ ಹೊರಟ ಆಪ್ ಪಕ್ಷದ ಮುಖಂಡರು ಮತ್ತು ಬೆಂಬಲಿಗರನ್ನು ಪೊಲೀಸರು ಬಂಧಿಸಿದ್ದಾರೆ. 
ಇನ್ನು ಪ್ರತಿಭಟನೆಯಲ್ಲಿ ಪಾಲ್ಗೊಂಡ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನರೇಂದ್ರ ಮೋದಿ ಮತ್ತು ಸೋನಿಯಾ ಗಾಂಧಿ ವಿರುದ್ಧ ಕಿಡಿಕಾರಿ, ಪ್ರತಿಭಟನಾ ಸ್ಥಳದಿಂದ ಹೊರಟಿದ್ದಾರೆ. ತದ ನಂತರ ರ್ಯಾಲಿ ಆರಂಭಗೊಂಡಿದೆ. ಎಎಪಿ ನಾಯಕರಾದ ಅಶುತೋಷ್, ಸಂಜಯ್ ಸಿಂಗ್, ದಿಲಿಪ್ ಪಾಂಡೆ ಮತ್ತು ಬೆಂಬಲಿಗರನ್ನು ಬಂಧಿಸಿದ್ದು, ಸಂಸತ್ ರಸ್ತೆ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. 
ಇಂದು ಬೆಳಿಗ್ಗೆ ಪ್ರತ್ಯೇಕವಾಗಿ 100 ಮಂದಿಯನ್ನು ಬಂಧಿಸಿ ತುಗಲಕ್ ರಸ್ತೆ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು. ಇದರ ಬೆನ್ನಲ್ಲೇ ಇಂದು ಮದ್ಯಾಹ್ನ 300 ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಪ್ರತಿಭಟನಾಕಾರರ ವಿರುದ್ಧ ಸಿಆರ್ ಪಿಸಿ ಸೆಕ್ಷನ್ 144ರಡಿ ಪ್ರಕರಣ ದಾಖಲಿಸಲಾಗಿದೆ ಎಂದು ದೆಹಲಿ ಡಿಸಿಪಿ ಜಟಿನ್ ನಾರ್ವಲ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com