ಕಾಂಗ್ರೆಸ್ ಬಂಡಾಯ ಶಾಸಕರ ಅನರ್ಹತೆ: ತೀರ್ಪು ಕಾಯ್ದಿರಿಸಿದ ಉತ್ತರಾಖಂಡ್ ಹೈಕೋರ್ಟ್

9 ಕಾಂಗ್ರೆಸ್ ಬಂಡಾಯ ಶಾಸಕರನ್ನು ಉತ್ತರಾಖಂಡ ವಿಧಾನಸಭೆಯಿಂದ ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ...
ಉತ್ತರಾಖಂಡ್ ಹೈಕೋರ್ಟ್
ಉತ್ತರಾಖಂಡ್ ಹೈಕೋರ್ಟ್
ನೈನಿತಾಲ್: 9 ಕಾಂಗ್ರೆಸ್ ಬಂಡಾಯ ಶಾಸಕರನ್ನು ಉತ್ತರಾಖಂಡ ವಿಧಾನಸಭೆಯಿಂದ ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿದ ಉತ್ತರಾಖಂಡ್ ಹೈಕೋರ್ಟ್, ತೀರ್ಪನ್ನು ಮೇ 9ಕ್ಕೆ ಕಾಯ್ದಿರಿಸಿದೆ.
ಇಂದು ಸಹ ಅನರ್ಹತೆ ಪ್ರಶ್ನಿಸಿ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮುಂದುವರೆಸಿದ ನ್ಯಾಯಮೂರ್ತಿ ಯುಸಿ ಧ್ಯಾನಿ ಅವರು, ಸುಮಾರು 3 ಗಂಟೆಗಳ ಕಾಲ ವಾದ-ಪ್ರತಿವಾದ ಆಲಿಸಿದರು. ಬಳಿಕ ಪ್ರಕರಣದ ವಿಚಾರಣೆ ಮುಕ್ತಾಯಗೊಂಡಿದ್ದು, ಸೋಮವಾರ ಬೆಳಗ್ಗೆ 10.15ಕ್ಕೆ ತೀರ್ಪು ಪ್ರಕಟಿಸುವುದಾಗಿ ಘೋಷಿಸಿದರು. 
ತಮ್ಮನ್ನು ಅನರ್ಹಗೊಳಿಸಿದ ವಿಧಾನಸಭಾಧ್ಯಕ್ಷರ ಕ್ರಮದ ವಿರುದ್ಧ 9 ಕಾಂಗ್ರೆಸ್ ಬಂಡಾಯ ಶಾಸಕರು ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಮಧ್ಯೆ ಮೇ 10ರಂದು ಉತ್ತರಾಖಂಡ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಹರೀಶ್ ರಾವತ್ ಅವರಿಗೆ ಸುಪ್ರೀಂಕೋರ್ಟ್ ಸೂಚಿಸಿದೆ. ಆದರೆ ಬಂಡಾಯ ಶಾಸಕರು ಮತದಾನದಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com