
ನವದೆಹಲಿ: ಬರಪೀಡಿತ ರಾಜ್ಯಗಳಾದ, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕ ಮುಖ್ಯಮಂತ್ರಿಗಳೊಂದಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಚರ್ಚೆ ನಡೆಸಲಿದ್ದಾರೆ.
ಬರ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮೋದಿ ಪ್ರತ್ಯೇಕವಾಗಿ ಚರ್ಚಿಸಲಿದ್ದಾರೆ. ರಾಜ್ಯದಲ್ಲಿ ತಲೆದೋರಿರುವ ನೀರಿನ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಪ್ರಧಾನಿ ಮಂತ್ರಿಗಳ ಜೊತೆಗೆ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಕೂಡ ಭಾಗವಹಿಸಲಿದ್ದಾರೆ. ಬರ ಪೀಡಿತ ಪ್ರದೇಶಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಮೋದಿ ಭಾಷಣ ಮಾಡಲಿದ್ದಾರೆ.
ಇನ್ನೂ ಬರಪೀಡಿತ ರಾಜ್ಯಗಳಿಗೆ ಹಣಕಾಸು ಇಲಾಖೆ ಅನುಮತಿ ನೀಡಿದ ಕೂಡಲೇ ಹೆಚ್ಚಿನ ಅನುದಾನ ಬಿಡುಗಡೆ ಮಾಡುವುದಾಗಿ ಸಂಪುಟ ಕಾರ್ಯದರ್ಶಿ ಪಿ.ಕೆ ಸಿನ್ಹಾ ತಿಳಿಸಿದ್ದಾರೆ.
Advertisement