ಸುಬ್ರಮಣಿಯನ್ ಸ್ವಾಮಿ
ದೇಶ
ಅಗಸ್ಟಾ ಹಗರಣ; ಮೊದಲ ಪೇಡ್ ನ್ಯೂಸ್ ಪತ್ರಕರ್ತನ ವಿಚಾರಣೆ: ಸ್ವಾಮಿ ಹೊಸ ಬಾಂಬ್
ಅಗಸ್ಟಾ ವೆಸ್ಟ್‌ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ಮುಂದುವರೆದಿದ್ದು...
ನವದೆಹಲಿ: ಅಗಸ್ಟಾ ವೆಸ್ಟ್‌ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ಮುಂದುವರೆದಿದ್ದು, ಹಗರಣಕ್ಕೆ ಸಂಬಂಧಿಸಿದಂತೆ ಮೊದಲ ಪೇಡ್ ನ್ಯೂಸ್ ಪತ್ರಕರ್ತನನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಶನಿವಾರ ಹೊಸ ಬಾಂಬ್ ಸಿಡಿಸಿದ್ದಾರೆ.
ಇದಷ್ಟೆ ಅಲ್ಲ, ರಾಫೇಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಐದು ಕೋಟಿ ರುಪಾಯಿ ಲಂಚ ಪಡೆದ ಮತ್ತೊರ್ವ ಪತ್ರಕರ್ತನಿಗಾಗಿಯೂ ಜಾರಿ ನಿರ್ದೇಶನಾಲಯ ತೀವ್ರ ಶೋಧ ನಡೆಸುತ್ತಿದೆ ಎಂದು ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.
ಕಳೆದ ಏಪ್ರಿಲ್ 7ರಂದು ಇಟಲಿ ಕೋರ್ಟ್ ನೀಡಿದ್ದ ತೀರ್ಪಿನಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಹಾಗೂ ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥ ಎಸ್ ಪಿ ತ್ಯಾಗಿ ಅವರ ಹೆಸರನ್ನು ಉಲ್ಲೇಖಿಸಲಾಗಿದೆ. ಈ ಸಂಬಂಧ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ ಮಧ್ಯ ತೀವ್ರ ವಾಗ್ಯುದ್ಧ, ಗಲಭೆ, ಗದ್ದಲ ನಡೆಯುತ್ತಿದೆ.


