55 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಆಯ ತಪ್ಪಿ ಆಳವಾದ ಕಣಿವೆಗೆ ಬಿದ್ದಿದೆ. 9 ಮಂದಿ ಬಸ್ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದು, ಇನ್ನು ಹೆಚ್ಚು ಸಾವು ಆಗಿರುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ. ಇನ್ನು ಕೆಲವರು ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.