ಇಂದು ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಈ ಸಂಬಂಧ ಉತ್ತರಾಖಂಡ್ ಸ್ವೀಕರ್ ಜಿ.ಎಸ್. ಕುಂಜವಾಲ್ ಹಾಗೂ ಮುಖ್ಯಮಂತ್ರಿ ಹರೀಶ್ ರಾವತ್ ಅವರಿ ನೋಟಿಸ್ ನೀಡಿ, ವಿಚಾರಣೆಯನ್ನು ಜೂನ್ 12ಕ್ಕೆ ಮುಂದೂಡಿದೆ. ಅಲ್ಲದೆ ನಾಳೆ ನಡೆಯುವ ವಿಶ್ವಾಸಮತಯಾಚನೆ ವೇಳೆ ಸದನದಿಂದ ಹೊರಗುಳಿಯುವಂತೆ ಸೂಚಿಸಿದೆ. ಇದರಿಂದಾಗಿ ಹರೀಶ್ ರಾವತ್ ನಿಟ್ಟುಸಿರು ಬಿಡುವಂತಾಗಿದ್ದರೆ, ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ.