ಕಾರನ್ನು ಓವರ್ ಟೇಕ್ ಮಾಡಿದ್ದಕ್ಕೆ ಯುವಕನ ಹತ್ಯೆ: ಅಪರಾಧಿಗಳನ್ನು ಬಿಡುವುದಿಲ್ಲ ಎಂದ ನಿತೀಶ್ ಕುಮಾರ್

ಪ್ರಕರಣದಲ್ಲಿ ಭಾಗಿಯಾಗಿರುವುವವರು ಯಾರೇ ಆಗಿದ್ದರು ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಿತೀಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ನಿತೀಶ್ ಕುಮಾರ್
ನಿತೀಶ್ ಕುಮಾರ್

ಗಯಾ: ಜೆಡಿಯು ರಾಜಕಾರಣಿಯ ಮಗ ಪ್ರಯಾಣಿಸುತ್ತಿದ್ದ ಎಸ್‌ಯುವಿ ಕಾರನ್ನು ಓವರ್‌ಟೇಕ್ ಮಾಡಿದ್ದಕ್ಕಾಗಿ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೆ ತಲೆನೋವಾಗಿ ಪರಿಣಮಿಸಿದ್ದು, ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆ ಏಳಲಾರಂಭಿಸಿದೆ.
ಯುವಕನ ಕೊಲೆ ಪ್ರಕರಣದ ನಂತರ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಟೀಕೆ ವ್ಯಾಪವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ನಿತೀಶ್ ಕುಮಾರ್ ಯುವಕನ ಹತ್ಯೆ ಮಾಡಿರುವವರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವುವವರು ಯಾರೇ ಆಗಿದ್ದರು ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಿತೀಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದರ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ನಿತೀಶ್ ಕುಮಾರ್, ಕಾನೂನನ್ನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ, ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ ಕೈಗೊಂಡಿರುವ ಕ್ರಮದ ಬಗ್ಗೆ ಪ್ರತಿಕ್ರಿಯೆ ನೀಡಿದ ನಿತೀಶ್ ಕುಮಾರ್, ಜೆಡಿಯು ಎಂಎಲ್ ಸಿಯ ಪುತ್ರನ ಅಂಗರಕ್ಷಕರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಬಿಹಾರದ ಉದ್ಯಮಿ ಪುತ್ರ  ಆದಿತ್ಯ ಸಚ್‌ದೇವ ಜೆಡಿಯು ನಾಯಕಿ ಮನೋರಮಾ ದೇವಿ ಅವರಿಗೆ ಸೇರಿದ ರೇಂಜ್ ರೋವರ್‌ನ್ನು ಓವರ್ ಟೇಕ್ ಮಾಡಿದ್ದರು. ಓವರ್‌ಟೇಕ್ ಮಾಡಿದ ಕೂಡಲೇ ಕಾರಿನಲ್ಲಿದ್ದ ಮನೋರಮಾ ದೇವಿ ಅವರ ಪುತ್ರ ರೋಕಿ ಮತ್ತು ಆತನ ಬಾಡಿಗಾರ್ಡ್  ಆದಿತ್ಯನ ಕಾರಿನ ಮೇಲೆ ಗುಂಡು ಹಾರಿಸಿದ್ದಾರೆ, ಘಟನೆಯಲ್ಲಿ ಗುಂಡು ತಗುಲಿ ಆದಿತ್ಯ ಸಾವನ್ನಪ್ಪಿದ್ದರು. ಘಟನೆಯನ್ನು ಖಂಡಿಸಿ ಎನ್ ಡಿಎ ಬಿಹಾರದ ಗಯಾದಲ್ಲಿ ಪ್ರತಿಭಟನೆ ನಡೆಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com