ಪ್ರಧಾನಿ ಮೋದಿ ಬಹುಶಃ ಸರ್ಕಾರ ಉರುಳಿಸುವ ಪ್ರಯತ್ನ ಅಂತ್ಯಗೊಳಿಸಬಹುದು: ಕೇಜ್ರಿವಾಲ್

ಉತ್ತರಾಖಂಡ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗಿದ್ದ ಪ್ರಧಾನಿ ನರೇಂದ್ರ ಮೋದಿ ಬಹುಶಃ ಈಗಲಾದರೂ ಬಿಜೆಪಿಯೇತರ ಸರ್ಕಾರ ಉರುಳಿಸುವ ಪ್ರಯತ್ನವನ್ನು ಕೈಬಿಡಬಹುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ...
ಅರವಿಂದ್ ಕೇಜ್ರಿವಾಲ್ (ಸಂಗ್ರಹ ಚಿತ್ರ)
ಅರವಿಂದ್ ಕೇಜ್ರಿವಾಲ್ (ಸಂಗ್ರಹ ಚಿತ್ರ)
Updated on: 

ನವದೆಹಲಿ: ಉತ್ತರಾಖಂಡ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗಿದ್ದ ಪ್ರಧಾನಿ ನರೇಂದ್ರ ಮೋದಿ ಬಹುಶಃ ಈಗಲಾದರೂ ಬಿಜೆಪಿಯೇತರ ಸರ್ಕಾರ ಉರುಳಿಸುವ ಪ್ರಯತ್ನವನ್ನು ಕೈಬಿಡಬಹುದು  ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಉತ್ತರಾಖಂಡ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಮುಕ್ತಾಯದ ಬಳಿಕ ಮಂಗಳವಾರ ಟ್ವೀಟ್ ಮಾಡಿರುವ ಕೇಜ್ರಿವಾಲ್, ಉತ್ತರಾಖಂಡ ರಾಜಕೀಯ ಬಿಕ್ಕಟ್ಟಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು  ಬಿಜೆಪಿ ಪಕ್ಷವೇ ಕಾರಣ ಎಂದು ಆರೋಪಿಸಿದರು. "ಉತ್ತರಖಂಡ ರಾಜಕೀಯ ಬಿಕ್ಕಟ್ಟಿನಿಂದ ಲಾಭ ಪಡೆಯುವ ಮಹತ್ವಾಕಾಂಕ್ಷೆ ಹೊಂದಿದ್ದ ಬಿಜೆಪಿಗೆ ಪ್ರಸ್ತುತ ಫಲಿತಾಂಶ ಪ್ರಮುಖ  ಹಿನ್ನಡೆಯಾಗಿದ್ದು, ಬಹುಶಃ ಈಗಲಾದರೂ ಬಿಜೆಪಿಯೇತರ ಸರ್ಕಾರಗಳನ್ನು ಉರುಳಿಸುವ ತಮ್ಮ ಪ್ರಯತ್ನವನ್ನು ಕೈಬಿಡಬಹುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com