ಸಾಂದರ್ಭಿಕ ಚಿತ್ರ
ದೇಶ
ಜರ್ಮನಿ: 'ಅಲ್ಲಾಹು ಅಕ್ಬರ್' ಎಂದು ಕೂಗಿ ನಾಲ್ಕು ಜನಕ್ಕೆ ಇರಿದ
'ಅಲ್ಲಾಹು ಅಕ್ಬರ್' ಎಂದು ಘೋಷಣೆ ಕೂಗುತ್ತಿದ್ದ ವ್ಯಕ್ತಿಯೊಬ್ಬ ನಾಲ್ಕು ಮಂದಿಗೆ ಚಾಕುವಿನಿಂದ ಇರಿದಿರುವ ಘಟನೆ ಜರ್ಮನಿ...
ಮುನಿಚ್: 'ಅಲ್ಲಾಹು ಅಕ್ಬರ್' ಎಂದು ಘೋಷಣೆ ಕೂಗುತ್ತಿದ್ದ ವ್ಯಕ್ತಿಯೊಬ್ಬ ನಾಲ್ಕು ಮಂದಿಗೆ ಚಾಕುವಿನಿಂದ ಇರಿದಿರುವ ಘಟನೆ ಜರ್ಮನಿಯಲ್ಲಿ ನಡೆದಿದೆ.
ಜರ್ಮನಿಯ ರೈಲ್ವೆ ನಿಲ್ದಾಣದಲ್ಲಿ ಅಲ್ಲಾಹು ಅಕ್ಬರ್ ಎಂದು ಕೂಗಿ ಕೊಂಡು ಬಂದ ವ್ಯಕ್ತಿ ನಾಲ್ಕು ಮಂದಿಗೆ ಚಾಕುವಿನಿಂದ ಇರಿದಿದ್ದಾನೆ. ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯ ಮಾಧ್ಯಮಗಳಲ್ಲಿ ಆ ವ್ಯಕ್ತಿ ಅಲ್ಲಾಹು ಅಕ್ಬರ್ ಎಂದು ಕೂಗುತ್ತಾ ಚಾಕುವಿನಿಂದ ನಾಲ್ವರಿಗೆ ಇರಿದಿದ್ದಾನೆಂದು ಪ್ರತ್ಯಕ್ಷ್ಯದರ್ಶಿಗಳು ಹೇಳಿದ್ದಾರೆಂದು ವರದಿಯಾಗಿದೆ. ಆದರೆ ಪೊಲೀಸರು ಮಾತ್ರ ಈ ಘಟನೆ ರಾಜಕೀಯ ಪ್ರೇರಿತವಾಗಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ