ಲಕ್ನೋ: ಉತ್ತರಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದರ ಪ್ರಚಾರಕ್ಕಾಗಿ ಪ್ರಿಯಾಂಕಾ ಗಾಂಧಿ ವಾದ್ರಾ ರನ್ನು ರಂಗಕ್ಕಿಳಿಸಬೇಕೆಂದು ಚುನಾವಣಾ ಸಲಹೆಗಾರ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಪ್ರಿಯಾಂಕಾ ಅವರನ್ನು ಚುನಾವಣಾ ರಂಗಕ್ಕಿಳಿಸಬೇಕೆಂದು ಹಲವು ವರ್ಷಗಳಿಂದ ಉತ್ತರ ಪ್ರದೇಶದ ಕಾರ್ಯಕರ್ತರು ಒತ್ತಾಯಿಸುತ್ತಿದ್ದರು. ಆದರೆ ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಯಾವುದೇ ರೀತಿಯ ಪ್ರತಿಕ್ರಿಯೆಯನ್ನು ನೀಡಲಿಲ್ಲ.