ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ(ಸಂಗ್ರಹ ಚಿತ್ರ)
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ(ಸಂಗ್ರಹ ಚಿತ್ರ)

ಜ್ವರದಿಂದ ಬಳಲುತ್ತಿರುವ ರಾಹುಲ್ ಗಾಂಧಿ, ದಕ್ಷಿಣ ರಾಜ್ಯಗಳ ಪ್ರವಾಸ ರದ್ದು

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ತಮ್ಮ ಎರಡು ದಿನಗಳ ಪುದುಚೆರಿ, ತಮಿಳು ನಾಡು ಹಾಗೂ ಕೇರಳ ರಾಜ್ಯಗಳ ...
Published on

ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ತಮ್ಮ ಎರಡು ದಿನಗಳ ಪುದುಚೆರಿ, ತಮಿಳು ನಾಡು ಹಾಗೂ ಕೇರಳ ರಾಜ್ಯಗಳ ಚುನಾವಣಾ ಪ್ರಚಾರ ಪರ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಅವರು ಜ್ವರದಿಂದ ತೀವ್ರ ಬಳಲುತ್ತಿದ್ದಾರೆ.

''ನಿನ್ನೆಯಿಂದ ತುಂಬಾ ಜ್ವರದಿಂದ ಬಳಲುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ರಾಹುಲ್ ಗಾಂಧಿ ಟ್ವಿಟ್ಟರ್ ನಲ್ಲಿ ಕಳೆದ ರಾತ್ರಿ ಬರೆದಿದ್ದಾರೆ. ಪೂರ್ವ ನಿಗದಿಯಂತೆ ಮೇ 10 ಮತ್ತು 11ರಂದು ನನಗೆ ಪುದುಚೆರಿ, ತಮಿಳುನಾಡು ಮತ್ತು ಕೇರಳ ರಾಜ್ಯಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ, ಜನತೆ ಕ್ಷಮಿಸಬೇಕು ಎಂದು ಅವರು ಕೇಳಿಕೊಂಡಿದ್ದಾರೆ.

ಪುದುಚೆರಿಯ ಕಾಂಗ್ರೆಸ್ ಘಟಕಕ್ಕೆ ನಿನ್ನೆ ರಾಹುಲ್ ಗಾಂಧಿಗೆ ಜೀವ ಬೆದರಿಕೆ ಪತ್ರ ಬಂದ ಹಿನ್ನಲೆಯಲ್ಲಿ ಕಾಂಗ್ರೆಸ್ ನ ಉನ್ನತ ನಾಯಕರು ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ಹೆಚ್ಚಿನ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ನಾರಾಯಣಸಾಮಿ ನಿನ್ನೆ ಪುದುಚೆರಿಯಲ್ಲಿ ಮಾತನಾಡಿ, ತಮಗೆ ಹಾಗೂ ರಾಹುಲ್ ಗಾಂಧಿಯವರಿಗೆ ಜೀವಬೆದರಿಕೆಯೊಡ್ಡಿ ಸಹಿ ಹಾಕದಿರುವ ಪತ್ರವೊಂದು ಬಂದಿದೆ ಎಂದು ಹೇಳಿದ್ದರು.

ಈ ಹಿನ್ನಲೆಯಲ್ಲಿ ವಿಶೇಷ ರಕ್ಷಣಾ ಗುಂಪು ಮತ್ತು ಜಾಗೃತ ದಳಕ್ಕೆ ಗೃಹ ಸಚಿವ ರಾಜನಾಥ್ ಸಿಂಗ್ ಆದೇಶ ನೀಡಿ, ರಾಹುಲ್ ಗಾಂಧಿಯವರಿಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com