ರಾಜ್ಯಸಭೆಯ 53 ಸಂಸದರ ನಿವೃತ್ತಿ: ಮೇಲ್ಮನೆಯಲ್ಲಿ ಕುಗ್ಗಲಿದೆ 'ಕೈ' ಬಲ, ಪ್ರಬಲವಾಗಲಿದೆ ಬಿಜೆಪಿ

ಸಂಸತ್ ನ ಮೇಲ್ಮನೆ ರಾಜ್ಯಸಭೆಯಲ್ಲಿ ಮೇ.13 ಕ್ಕೆ 53 ಸಂಸದರ ಅವಧಿ ಮುಕ್ತಾಯಗೊಳ್ಳಲಿದೆ.
ರಾಜ್ಯಸಭೆ
ರಾಜ್ಯಸಭೆ
Updated on: 

ನವದೆಹಲಿ: ಸಂಸತ್ ನ ಮೇಲ್ಮನೆ ರಾಜ್ಯಸಭೆಯಲ್ಲಿ ಮೇ.13 ಕ್ಕೆ  53 ಸಂಸದರ ಅವಧಿ ಮುಕ್ತಾಯಗೊಳ್ಳಲಿದ್ದು, ಇತ್ತೀಚಿನ ವರ್ಷಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮೇಲ್ಮನೆ ಸದಸ್ಯರು ಒಂದೇ ದಿನ ನಿವೃತ್ತರಾಗುತ್ತಿದ್ದಾರೆ.

ರಾಜ್ಯಸಭೆಯಲ್ಲಿ ಈಗ ಕಾಂಗ್ರೆಸ್ ಗೆ ಬಹುಮತವಿದ್ದು(65 ಸದಸ್ಯರು) ನಿವೃತ್ತರಾಗುತ್ತಿರುವ 53 ಸದಸ್ಯರ ಪೈಕಿ 16 ಸದಸ್ಯರು ಕಾಂಗ್ರೆಸ್ ನವರೇ ಆಗಿರುವುದರಿಂದ ರಾಜ್ಯಸಭೆ ಚುನಾವಣೆ ಬಳಿಕ ಮೇಲ್ಮನೆಯಲ್ಲಿ ವಿರೋಧಪಕ್ಷ ಬಹುಮತ ಕಳೆದುಕೊಳ್ಳಲಿದೆ.

ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಸ್ಥಾನ ಪಡೆದು, ರಾಜ್ಯಗಳಲ್ಲೂ ಅಧಿಕಾರ ಕಳೆದುಕೊಂಡಿರುವುದರಿಂದ ರಾಜ್ಯಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ಆಯ್ಕೆ ಮಾಡಲು ಸಾಧ್ಯವಾಗುವುದಿಲ್ಲ. ಇನ್ನು ಆಡಳಿತ ನಡೆಸುತ್ತಿರುವ ಬಿಜೆಪಿಯ ಸಚಿವರಾದ ವೆಂಕಯ್ಯ ನಾಯ್ಡು, ಪಿಯೂಷ್ ಗೋಯಲ್, ನಿರ್ಮಲಾ ಸೀತಾರಾಮನ್, ಮುಕ್ತಾರ್ ಅಬ್ಬಾಸ್ ನಖ್ವಿ, ವೈಎಸ್ ಚೌಧರಿ ಅವರ ಅವಧಿಯೂ ಇಂದಿಗೆ ಮುಕ್ತಾಯಗೊಳ್ಳಲಿದ್ದು, ರಾಜ್ಯಸಭೆಗೆ ಅವರು ಪುನರಾಯ್ಕೆಗೊಳ್ಳುವುದು ಬಹುತೇಕ ಖಚಿತವಾಗಿದೆ.

ಈ ಬಾರಿಯ ರಾಜ್ಯಸಭೆ ಚುನಾವಣೆಯ ಮೂಲಕ ಬಿಜೆಪಿ ಮೇಲ್ಮನೆಯಲ್ಲಿ ತನ್ನ ಸದಸ್ಯರ ಬಲವನ್ನು ಹೆಚ್ಚಿಸಿಕೊಳ್ಳಲು ರಾಜಸ್ಥಾನದಲ್ಲಿ ಪಕ್ಷಕ್ಕೆ ಇರುವ ಬಹುಮತ ನೆರವಾಗಲಿದೆ ಎಂದು ವಿಶ್ಲೇಷಿಸಲಾಗಿದೆ. ಬಿಜೆಪಿಯೊಂದಿಗೆ ಸಮಾಜವಾದಿ ಪಕ್ಷದ ಸದಸ್ಯರು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com