ತಮಿಳುನಾಡು, ಕೇರಳ, ಪುದುಚೇರಿ ವಿಧಾನಸಭೆ ಚುನಾವಣಾ ಪ್ರಚಾರಕ್ಕೆ ತೆರೆ

ತಮಿಳುನಾಡು, ಕೇರಳ ಹಾಗೂ ಪುದುಚೇರಿ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಶನಿವಾರ ಸಂಜೆ ಅಧಿಕೃತವಾಗಿ ತೆರೆ ಬಿದ್ದಿದ್ದು,
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಚೆನ್ನೈ: ತಮಿಳುನಾಡು, ಕೇರಳ ಹಾಗೂ ಪುದುಚೇರಿ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಶನಿವಾರ ಸಂಜೆ ಅಧಿಕೃತವಾಗಿ ತೆರೆ ಬಿದ್ದಿದ್ದು, ಸೋಮವಾರ ಮತದಾನ ನಡೆಯಲಿದೆ.
ತಮಿಳುನಾಡಿನ 234 ಸ್ಥಾನಗಳಿಗೆ, ಕೇರಳದ 140 ಸ್ಥಾನಗಳಿಗೆ ಹಾಗೂ ಪುದುಚೇರಿಯ 30 ಸ್ಥಾನಗಳಿಗೆ ಮೇ 16ರಂದು ಒಂದೇ ಹಂತದ ಮತದಾನ ನಡೆಯುತ್ತಿದೆ.
ಮೇ 19ರಂದು ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದೊಂದಿಗೆ ಈ ಮೂರು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿಳಲಿದೆ.
ಕೇರಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 98 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ, ಕಾಂಗ್ರೆಸ್ 87 ಹಾಗೂ ಸಿಪಿಐ-ಎಂ 85 ಸ್ಥಾನಗಳಲ್ಲಿ ಸ್ಪರ್ಧಿಸಿವೆ. ಅಲ್ಲದೆ 782 ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com