ಏರ್ ಇಂಡಿಯಾ ವಿಮಾನದಲ್ಲಿ ದೆಹಲಿ ಮಹಿಳೆಗೆ ಲೈಂಗಿಕ ಕಿರುಕುಳ

ದೆಹಲಿಯಿಂದ ಹೈದರಾಬಾದ್ ಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ದೆಹಲಿ ಮೂಲದ ಶಿಕ್ಷಕಿಗೆ ಸಹ ಪ್ರಯಾಣಿಕ ಅಸಭ್ಯವಾಗಿ ವರ್ತಿಸಿದ ಘಟನೆ...
ಏರ್ ಇಂಡಿಯಾ ವಿಮಾನ
ಏರ್ ಇಂಡಿಯಾ ವಿಮಾನ
Updated on: 

ಹೈದರಾಬಾದ್: ದೆಹಲಿಯಿಂದ ಹೈದರಾಬಾದ್ ಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ದೆಹಲಿ ಮೂಲದ ಶಿಕ್ಷಕಿಗೆ ಸಹ ಪ್ರಯಾಣಿಕ ಅಸಭ್ಯವಾಗಿ ವರ್ತಿಸಿದ ಘಟನೆ ವರದಿಯಾಗಿದೆ.

ಸೆಮಿನಾರ್ ನಲ್ಲಿ ಭಾಗವಹಿಸುವ ಸಲುವಾಗಿ ಶಿಕ್ಷಕಿ ದೆಹಲಿಯಿಂದ ಹೈದರಾಬಾದ್ ಗೆ ಪ್ರಯಾಣ ಬೆಳೆಸಿದ್ದರು. ದೆಹಲಿ ವಿಮಾನ ನಿಲ್ದಾಣದಿಂದ ಏರ್ ಇಂಡಿಯಾ ವಿಮಾನ ಟೇರ್ ಆಫ್ ಆಗುತ್ತಿದ್ದಂತೆ ಸಹ ಪ್ರಯಾಣಿಕ ಶಿಕ್ಷಕಿ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ. ಕೂಡಲೇ ಶಿಕ್ಷಕಿ ವಿಮಾನ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ವಿಮಾನ ಶಂಶಾಬಾದ್ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಇಳಿಯುತ್ತಿದ್ದಂತೆ ಶಿಕ್ಷಕಿ ಪೊಲೀಸರಿಗೆ ದೂರು ನೀಡಿದ್ದಾರೆ. ಶಿಕ್ಷಕಿ ದೂರಿನನ್ವಯ ಪೊಲೀಸರು ಆತನ ವಿರುದ್ಧ ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಇನ್ಸ್ ಪೆಕ್ಟರ್ ಟಿ. ಸುಧಾಕರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com