ಕೊಲೆಯಾದ ಪತ್ರಕರ್ತ ಆರ್ ಜೆಡಿ ಮಾಜಿ ಸಂಸದನ ಕೃತ್ಯ ಬಯಲು ಮಾಡಿದ್ದರು: ಬಿಜೆಪಿ

ಬಿಹಾರದ ಸಿವಾನ್ ನಗರದ ಪ್ರಮುಖ ದಿನಪತ್ರಿಕೆಯೊಂದರ ಹಿರಿಯ ಪತ್ರಕರ್ತನ ಹತ್ಯೆಗೆ ಸಂಬಂಧಿಸಿದಂತೆ ಬಿಹಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ...
ರಾಜ್​ದೇವ್ ರಂಜನ್
ರಾಜ್​ದೇವ್ ರಂಜನ್
ನವದೆಹಲಿ: ಬಿಹಾರದ ಸಿವಾನ್ ನಗರದ ಪ್ರಮುಖ ದಿನಪತ್ರಿಕೆಯೊಂದರ ಹಿರಿಯ ಪತ್ರಕರ್ತನ ಹತ್ಯೆಗೆ ಸಂಬಂಧಿಸಿದಂತೆ ಬಿಹಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿದೆ.
ನಿನ್ನೆ ಹತ್ಯೆಯಾದ ಪತ್ರಕರ್ತ ಅಪರಹಣ ಮತ್ತು ಹತ್ಯೆ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾಗಿರುವ ಆರ್ ಜೆಡಿ ಮಾಜಿ ಸಂಸದ ಮೊಹಮ್ಮದ್ ಶಹಾಬುದ್ದೀನ್ ಅವರ ಕೃತ್ಯಗಳನ್ನು  ಬಯಲು ಮಾಡಿದ್ದರು ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಅವರು ಆರೋಪಿಸಿದ್ದಾರೆ.
ಆಡಳಿತ ಪಕ್ಷದ ಶಾಸಕರೊಬ್ಬರು ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಹತ್ಯೆಚಾರ ಮಾಡುವ ದಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೆ ಕೆಲವು ದಿನಗಳ ಹಿಂದೆ ಮತ್ತೊಬ್ಬ ಶಾಸಕ ರೇಲ್ವೆ ನಿಲ್ದಾಣದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿರುವುದನ್ನು ನಾವು ನೋಡಿದ್ದೇವೆ, ಇನ್ನು ಅವರ ಎಂಎಲ್ ಸಿ ಮನೋರಮಾ ದೇವಿ ಅವರ ಪುತ್ರ ರಾಕಿ ಯಾದವ್ ಅವರು ಆದಿತ್ಯ ಅವರನ್ನು ಗುಂಡಿಕ್ಕೆ ಹತ್ಯೆ ಮಾಡಿದ್ದಾರೆ. ಈ ಎಲ್ಲಾ ಘಟನೆಗಳನ್ನು ಗಮನಿಸಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಂಪೂರ್ಣ ಕುಸಿದಿದೆ ಎಂದು ಪಾತ್ರ ಹೇಳಿದ್ದಾರೆ.
ಪತ್ರಕರ್ತ ರಾಜ್​ದೇವ್ ರಂಜನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಿಹಾರ ಪೊಲೀಸರು ಇಬ್ಬರು ಶಂಕಿತ ವ್ಯಕ್ತಿಗಳನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
ಇನ್ನು ಸ್ಥಳೀಯ ಪೊಲೀಸರ ಮೇಲೆ ನಂಬಿಕೆ ಕಳೆದುಕೊಂಡಿರುವ ಕುಟುಂಬಸ್ಥರು, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದ್ದಾರೆ. ಆದರೆ ಪೊಲೀಸರು ಪ್ರಕರಣವನ್ನು ವೈಯಕ್ತಿಕ ಕಾಳಜಿಯಿಂದ ಭೇದಿಸುವುದಾಗಿ ತಿಳಿಸಿದ್ದಾರೆ. ಹಿಂದಿ ದಿನ ಪತ್ರಿಕೆ ಹಿಂದುಸ್ಥಾನ್ ತನ್ನ ಮುಖ ಪುಟವನ್ನು ಕಪ್ಪು ಬಿಳುಪಿನಲ್ಲಿ ಪ್ರಕಟಿಸುವ ಮೂಲಕ ರಾಜ್​ದೇವ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com