ಬಿಹಾರ: ಹಿಂದುಸ್ತಾನ್ ಪತ್ರಿಕೆಯ ಹಿರಿಯ ಪತ್ರಕರ್ತ ರಾಜದೇವ್ ರಂಜನ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ರಾಜ್ಯದ ಸಿವಾನ್ ನಲ್ಲಿ ಶುಕ್ರವಾರ ಸಂಜೆ ರಂಜನ್ ಅವರ ಮೇಲೆ ಗುಂಡುಹಾರಿಸಿ ಕೊಂದು ಹಾಕಲಾಗಿತ್ತು. ಘಟನೆ ಕುರಿತು ತನಿಖೆ ಆರಂಭಿಸಿರುವ ಪೊಲೀಸರು ಒಟ್ಟು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಭಾನುವಾರ ಮೂರನೇ ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ. ಸಿಸಿಟಿವಿ ಫೂಟೇಜ್ ನ್ನು ನೋಡಿಕೊಳ್ಳುತ್ತಿದ್ದವನನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಗಳು ನಾಪತ್ತೆಯಾಗಿರುವ ಹಿನ್ನಲೆಯಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.
ನಿನ್ನೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಸ್ಥಳಿಯರಿಂದ ಮಾಹಿತಿ ಕಲೆ ಹಾಕಿದ ಪೊಲೀಸರಿಗೆ ಸಿಕ್ಕ ಸಾಕ್ಷಿಗಳ ಆಧಾರದ ಮೇಲೆ ಈ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆಯ.