ಚುನಾವಣೋತ್ತರ ಸಮೀಕ್ಷೆ: ಅಸ್ಸಾಂನಲ್ಲಿ ಅರಳಿದ ಕಮಲ, ಮಮತಾ ಕೈಗೆ ಮತ್ತೆ ಅಧಿಕಾರ

ಬಹು ನಿರೀಕ್ಷಿತ ಐದು ರಾಜ್ಯಗಳ ಚುನಾವಣೆ ಸೋಮವಾರ ಅಂತ್ಯಗೊಂಡಿದ್ದು, ಆಡಳಿತ ವಿರೋಧಿ ಅಲೆಯ ನಡುವೆಯೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ...
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Updated on: 
ನವದೆಹಲಿ: ಬಹು ನಿರೀಕ್ಷಿತ ಐದು ರಾಜ್ಯಗಳ ಚುನಾವಣೆ ಸೋಮವಾರ ಅಂತ್ಯಗೊಂಡಿದ್ದು, ಆಡಳಿತ ವಿರೋಧಿ ಅಲೆಯ ನಡುವೆಯೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿದರೆ, ಅಸ್ಸಾಂನಲ್ಲಿ ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.
ಇಂಡಿಯಾ ಟುಡೇ ಸಮೀಕ್ಷೆ ಪ್ರಕಾರ, ಒಟ್ಟು 294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾಸಭೆಯಲ್ಲಿ ತೃಣಮೂಲ ಕಾಂಗ್ರೆಸ್ 243 ಸ್ಛಾನಗಳಲ್ಲಿ ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆಯಲಿದೆ. ಎಡರಂಗ 45 ಸ್ಥಾನ ಪಡೆದರೆ, ಬಿಜೆಪಿ 3 ಹಾಗೂ ಇತರರು 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದಾರೆ.
ಇನ್ನು ಸಿವೋಟರ್ ಸಮೀಕ್ಷೆ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ167 ಸ್ಛಾನ ಪಡೆದರೆ, ಎಡರಂಗ 120, ಬಿಜೆಪಿ 4 ಹಾಗೂ ಪಕ್ಷೇತರರು 3 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ. 
ಅಸ್ಸಾಂನಲ್ಲಿ ಅರಳುತ್ತಿದೆ ಕಮಲ
ಅಸ್ಸಾಂನಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯುತ್ತಿದ್ದು, ಒಟ್ಟು 126 ಸ್ಥಾನಗಳ ಪೈಕಿ ಬಿಜೆಪಿ 79ರಿಂದ 93 ಸ್ಥಾನ, ಕಾಂಗ್ರೆಸ್ 26ರಿಂದ 33 ಸ್ಥಾನ, ಎಐಯುಡಿಎಫ್ 6ರಿಂದ 10 ಸ್ಥಾನ ಹಾಗೂ 1ರಿಂದ 4 ಸ್ಥಾನಗಳಲ್ಲಿ ಪಕ್ಷೇತರರು ಗೆಲ್ಲುವ ಸಾಧ್ಯತೆ ಇದೆ.
ಸಿವೋಟರ್ ಸಮೀಕ್ಷೆ ಪ್ರಕಾರ, ಬಿಜೆಪಿ 57, ಕಾಂಗ್ರೆಸ್ 41, ಎಯುಡಿಎಪ್ 18 ಹಾಗೂ ಇತರರು 10 ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com