ಹಿಜ್ಬುಲ್ ಮುಜಾಹಿದ್ದೀನ್ ಉಗ್ರರಿಬ್ಬರನ್ನು ಹತ್ಯೆಗೈದ ಭಾರತೀಯ ಯೋಧರು

ಭಾರತೀಯ ಯೋಧರು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ...
ಭದ್ರತಾ ಪಡೆಗಳು
ಭದ್ರತಾ ಪಡೆಗಳು

ಶ್ರೀನಗರ: ಭಾರತೀಯ ಯೋಧರು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ.

ದಕ್ಷಿಣ ಕಾಶ್ಮೀರದ ಶೋಪಿಯಾನ್ ಮತ್ತು ಕುಪ್ವಾರ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ಗಸ್ತು ನಡೆಸುತ್ತಿದ್ದರು. ಈ ವೇಳೆ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಯೋಧರು ಗುಂಡಿನ ಮಳೆ ಸುರಿಸಿದ್ದು ಇಬ್ಬರು ಉಗ್ರರು ಬಲಿಯಾಗಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಕುಪ್ವಾರ ಮತ್ತು ಶೋಪಿಯಾನ್ ನಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com