ಪಠಾಣ್ ಕೋಟ್ ದಾಳಿ: ಜಿಇಎಂ ಮುಖ್ಯಸ್ಥ ಮಸೂದ್ ವಿರುದ್ಧ ರೆಡ್ ಕಾರ್ನರ್ ನೋಟಿಸ್

ಪಠಾಣ್ ಕೋಟ್ ದಾಳಿಯ ಪ್ರಮುಖ ರೂವಾರಿ ಜೈಷ್ ಇ ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್...
ಮಸೂದ್ ಅಜರ್
ಮಸೂದ್ ಅಜರ್
ನವದೆಹಲಿ: ಪಠಾಣ್ ಕೋಟ್ ದಾಳಿಯ ಪ್ರಮುಖ ರೂವಾರಿ ಜೈಷ್ ಇ ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಹಾಗೂ ಆತನ ಸಹೋದರ ಅಬ್ದುಲ್ ರಾವುಫ್ ವಿರುದ್ಧ ಇಂಟರ್ ನ್ಯಾಶನಲ್ ಪೊಲೀಸ್ ಅಸೋಸಿಯೇಶನ್(ಇಂಟರ್ ಪೋಲ್) ಮಂಗಳವಾರ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿದೆ.
ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿರುವ ಉಗ್ರ ಮಸೂದ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಹೊರಡಿಸುವಂತೆ ಭಾರತ ಸರ್ಕಾರ ಇಂಟರ್ ಪೋಲ್ ಗೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂಟರ್ ಪೋಲ್ ನೋಟಿಸ್ ಜಾರಿ ಮಾಡಿರುವುದಾಗಿ ಎಎನ್ ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಪಠಾಣ್ ಕೋಟ್ ವಾಯುನೆಲೆ ದಾಳಿಗೆ ಸಂಬಂಧಿಸಿದಂತೆ ಇತ್ತೀಚಿಗೆ ವಿಶೇಷ ಕೋರ್ಟ್ ಮಸೂದ್ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿದ ನಂತರ ರಾಷ್ಟ್ರೀಯ ತನಿಖಾ ತಂಡ(ಎನ್ಐಎ) ಪಾಕ್ ಉಗ್ರನ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸುವಂತೆ ಇಂಟರ್ ಪೋಲ್ ಗೆ ಮನವಿ ಮಾಡಿತ್ತು.
ಪಂಜಾಬ್ ನ ಮೊಹಾಲಿಯ ವಿಶೇಷ ಕೋರ್ಟ್ ಮಸೂದ್ ವಿರುದ್ಧ ಸಿಬಿಐ ಮೂಲಕ ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com