

ಚೆನ್ನೈ: ತಮಿಳುನಾಡಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಎರಡನೇಯ ದಿನವಾದ ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತದಿಂದಾಗಿ ಮುಂದಿನ ಎರಡು ದಿನಗಳಲ್ಲಿ ತಮಿಳುನಾಡು ಮತ್ತು ದಕ್ಷಿಣ ರಾಜ್ಯಗಳ ಕರಾವಳಿ ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ನಿರ್ದೇಶಕ ಎಸ್. ಬಾಲಚಂದರ್ ಹೇಳಿದ್ದಾರೆ.
ಮುಂದಿನ 48 ಗಂಟೆಗಳಲ್ಲಿ ವಾಯಭಾರ ಕುಸಿತ ತೀವ್ರವಾಗುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಉತ್ತರ ಶ್ರೀಲಂಕಾದ ಮೇಲೆ ಕಡಿಮೆ ಪ್ರಮಾಣದಲ್ಲಿ ಬೀಸುವ ಮಾರುತ ಮನ್ನಾರ್ ಮತ್ತು ಬಂಗಾಳ ಕೊಲ್ಲಿಯ ಕಡೆ ಬರುತ್ತಿದ್ದ ಹಾಗೆ ತೀವ್ರಗೊಳ್ಳಲಿದೆ. ರಾತ್ರಿ 8.30ರ ವೇಳೆಗೆ ಆಗ್ನೇಯ ಚೆನ್ನೈ ಕಡೆಗೆ ಸುಮಾರು 240 ಕಿಮೀ ವೇಗದಲ್ಲಿ ಬೀಸಲಿದೆ ಎಂದು ಅವರು ಹೇಳಿದ್ದಾರೆ.
ವಾಯುಭಾರ ಕುಸಿತದಿಂದಾಗಿ ಉತ್ತರ ತಮಿಳುನಾಡು, ಪುದುಚೆರಿ, ದಕ್ಷಿಣ ಆಂಧ್ರ, ಕರ್ನಾಟಕ, ಕೇರಳ ಮತ್ತು ಲಕ್ಷ್ಯದ್ವೀಪ ಹಾಗೂ ತಮಿಳುನಾಡಿನ ವಿವಿಧ ಭಾಗಗಗಳ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.