ದಿಗ್ವಿಜಯ್ ಸಿಂಗ್
ದಿಗ್ವಿಜಯ್ ಸಿಂಗ್

ಅಗಸ್ಟಾ ಹಗರಣದಲ್ಲಿ ಗಾಂಧಿ ಕುಟುಂಬದ ಹೆಸರನ್ನು ಎಳೆತರಲು ಪ್ರಧಾನಿ ಯತ್ನ: ದಿಗ್ವಿಜಯ್ ಸಿಂಗ್

ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದಲ್ಲಿ ನೆಹರು- ಗಾಂಧಿ ಕುಟುಂಬವನ್ನು ಎಳೆತರಲು ಪ್ರಧಾನಿ ನರೇಂದ್ರ ಮೋದಿ ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ.
Published on

ಹೈದರಾಬಾದ್: ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದಲ್ಲಿ ನೆಹರು- ಗಾಂಧಿ ಕುಟುಂಬವನ್ನು ಎಳೆತರಲು ಪ್ರಧಾನಿ ನರೇಂದ್ರ ಮೋದಿ ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ.
ಗಾಂಧಿ ಕುಟುಂಬದವರ ತೇಜೋವಧೆ ಮಾಡುವ ಅಜೆಂಡಾದ ಭಾಗವಾಗಿ ಪ್ರಧಾನಿ ಈ ಪ್ರಯತ್ನ ಮಾಡುತ್ತಿದ್ದಾರೆ ಎಂದಿರುವ ದಿಗ್ವಿಜಯ್ ಸಿಂಗ್, ಎರಡು ವರ್ಷಗಳಿಂದ ಎನ್ ಡಿಎ ಸರ್ಕಾರ ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣಕ್ಕೂ ಗಾಂಧಿ ಕುಟುಂಬಕ್ಕೂ ನಂಟು ಕಲ್ಪಿಸುತ್ತಿದೆ. ಆದರೆ ಅವರ ವಿರುದ್ಧದ ಆರೋಪಗಳನ್ನು ಸಾಬೀತು ಪಡಿಸಲು ಸಾಧ್ಯವಾಗಿಲ್ಲ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ವಿವಿಐಪಿ ಹೆಲಿಕಾಫ್ಟರ್ ಪೂರೈಕೆಯಲ್ಲಿ ಅಕ್ರಮ ನಡೆದಿದೆ ಎಂಬುದು ತಿಳಿಯುತ್ತಿದ್ದಂತೆಯೇ ಇಟಾಲಿಯ ಫಿನ್ ಮೆಕಾನಿಕಾ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಿ ಒಪ್ಪಂದವನ್ನು ರದ್ದುಗೊಳಿಸಿತ್ತು. ನಂತರ ಈ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಲಾಗಿತ್ತು. ಸರ್ಕಾರ ಮಾಡಬೇಕಿದ್ದ ಕೆಲಸವನ್ನು ಯುಪಿಎ ಸರ್ಕಾರ ಮಾಡಿತ್ತು ಎಂದು ದಿಗ್ವಿಜಯ್ ಸಿಂಗ್ ಹಗರಣದ ವಿಷಯದಲ್ಲಿ ಯುಪಿಎ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.    
ಇನ್ನು ಇಟಾಲಿ ನ್ಯಾಯಾಲಯದಲ್ಲಿ ಸೋನಿಯಾ ಗಾಂಧಿ ವಿರುದ್ಧದ ಆರೋಪ ಕೇಳಿಬಂದಿರುವ ಬಗ್ಗೆಯೂ ಪ್ರತಿಕ್ರಿಯೆ ನೀಡಿರುವ ದಿಗ್ವಿಜಯ್ ಸಿಂಗ್, ಇಟಾಲಿ ನ್ಯಾಯಾಲಯದಲ್ಲಿ ಸೋನಿಯಾ ಗಾಂಧಿ ವಿರುದ್ಧ ಆರೋಪಗಳಿಲ್ಲ. ಇದನ್ನು ಸ್ವತಃ ಮನೋಹರ್ ಪರಿಕ್ಕರ್ ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com